ಬೆಂಗಳೂರು, (ಫೆಬ್ರವರಿ 26): ಮೊನ್ನೆ ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು (ಧಾರವಾಡ ಪ್ರತಿಭಟನೆ) ದೇಶದ ಭಾರೀ ಸದ್ದು ಮಾಡಿದೆ. ಹೀಗಾಗಿ ಇದನ್ನು ಸಿದ್ದರಾಮಯ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂದು (ಫೆಬ್ರವರಿ 26) ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ನೇಮಕಾತಿಗೆ ಇರೋ ಸಾಧಕ ಭಾಧಕಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿ ನೇಮಕಾತಿಗೆ ತೀರ್ಮಾನಿಸಿದೆ. ಹೌದು…ಕರ್ನಾಟಕದ ವಿವಿಧ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಫಲ ಸಿಕ್ಕಂತಾಗಿದೆ.