Headlines

Dharmasthala Temple: ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ

Dharmasthala Temple: ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ


ದಕ್ಷಿಣ ಕನ್ನಡ, ಫೆಬ್ರವರಿ 28: ಮಾರ್ಚ್ 3 ರಂದು ಸಂಭವಿಸಿದ ರಕ್ತ ಚಂದ್ರಗ್ರಹಣದ ಜೊತೆಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಭಕ್ತರಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.

ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30 ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30 ರಿಂದ ದೇವರ ದರ್ಶನವನ್ನು ಪ್ರಾರಂಭಿಸಲಾಗುತ್ತದೆ. ದೇವಸ್ಥಾನಗಳಲ್ಲಿ ಗ್ರಹಣದ ಸಂದರ್ಭದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂಬ ನಿಯಮಕ್ಕೆ ಅನುಗುಣವಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಅನುಕೂಲ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಕ್ತಾದಿಗಳು ಈ ಬದಲಾದ ದರ್ಶನ ಸಮಯಗಳನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನಕ್ಕೆ ಆಗಮಿಸುವಂತೆ ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿ ವಿನಂತಿಸಿದೆ.\

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *