BREAKING: ಆಂಧ್ರಪ್ರದೇಶದಲ್ಲಿ ಭೀಕರ ಪಟಾಕಿ ದುರಂತ: ಸ್ಫೋಟಕ್ಕೆ 18 ಮಂದಿ ಬಲಿ, ಹಲವರ ಸ್ಥಿತಿ ಗಂಭೀರ | Kakinada Firecracker Factory Explosion Andhra Pradesh Death Update San

ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ 18 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ದುರಂತದಲ್ಲಿ ಹಲವರು ಗಾಯಗೊಂಡಿದ್ದು, ಘಟನೆಯ ಕುರಿತು ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. 

ಕಾಕಿನಾಡ(ಫೆ.28): ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತಕ್ಕೆ 18 ಮಂದಿ ಬಲಿಯಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರ್ಖಾನೆಯನ್ನು ಆವರಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ನಂಬಲಾಗಿದೆ.

ತನಿಖೆಗೆ ಆದೇಶ

ಈ ಭೀಕರ ಸ್ಫೋಟಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ದುರ್ಘಟನೆ ಸಂಭವಿಸುವ ವೇಳೆ ಕಾರ್ಖಾನೆಯಲ್ಲಿ 30 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಿದ್ದಾರೆ. ಈ ದುರಂತವು ಇಡೀ ಜಿಲ್ಲೆಯಾದ್ಯಂತ ಶೋಕದ ಛಾಯೆ ಮೂಡಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರವು ಶೀಘ್ರದಲ್ಲೇ ಪರಿಹಾರ ಘೋಷಿಸುವ ಸಾಧ್ಯತೆಯಿದೆ.

Source link

Leave a Reply

Your email address will not be published. Required fields are marked *