ಶಾಸಕ ವಿನಯ್ ಕುಲಕರ್ಣಿ ಜೈಲಿಂದ ರಿಲೀಸ್; ಅಭಿಮಾನಿಗಳಿಂದ ದೊಡ್ಡಹಾರ ಹಾಕಿ, ಸಿಹಿ ತಿನ್ನಿಸಿ ಸಂಭ್ರಮ! | Dharwad Mla Vinay Kulkarni Released From Parappana Agrahara Jail Visit Jade Muneshwara Temple Sat

ಶಾಸಕ ವಿನಯ್ ಕುಲಕರ್ಣಿ ಜೈಲಿಂದ ರಿಲೀಸ್; ಅಭಿಮಾನಿಗಳಿಂದ ದೊಡ್ಡಹಾರ ಹಾಕಿ, ಸಿಹಿ ತಿನ್ನಿಸಿ ಸಂಭ್ರಮ! | Dharwad Mla Vinay Kulkarni Released From Parappana Agrahara Jail Visit Jade Muneshwara Temple Sat



ಶಾಸಕ ವಿನಯ್ ಕುಲಕರ್ಣಿ ಜೈಲಿಂದ ರಿಲೀಸ್; ಅಭಿಮಾನಿಗಳಿಂದ ದೊಡ್ಡಹಾರ ಹಾಕಿ, ಸಿಹಿ ತಿನ್ನಿಸಿ ಸಂಭ್ರಮ! | Dharwad Mla Vinay Kulkarni Released From Parappana Agrahara Jail Visit Jade Muneshwara Temple Sat

ಯೋಗೇಶ್ ಗೌಡರ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ವಿನಯ್ ಕುಲಕರ್ಣಿ ಅವರು ಸುಪ್ರೀಂ ಕೋರ್ಟ್‌ನ ಷರತ್ತುಬದ್ಧ ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆ ದೇವಸ್ಥಾನಕ್ಕೆ ಭೇಟಿ ನೀಡಿ, ನ್ಯಾಯಾಂಗದ ಮೇಲೆ ನಂಬಿಕೆ ವ್ಯಕ್ತಪಡಿಸಿದರು.

ಬೆಂಗಳೂರು (ಫೆ.28): ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡರ್ ಕೊಲೆ ಪ್ರಕರಣದಲ್ಲಿ ಸಿಲುಕಿ ಜೈಲು ಪಾಲಾಗಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರು ಕೊನೆಗೂ ಬಿಡುಗಡೆಯಾಗಿದ್ದಾರೆ. ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ಹಿನ್ನೆಲೆಯಲ್ಲಿ, ಶನಿವಾರ ಸಂಜೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿನಯ್ ಕುಲಕರ್ಣಿ ಹೊರಬಂದಿದ್ದಾರೆ.

ಜೈಲು ಬಾಗಿಲಲ್ಲೇ ದೈವ ಭಕ್ತಿ:

ಜೈಲಿನಿಂದ ಹೊರಬರುತ್ತಿದ್ದಂತೆಯೇ ವಿನಯ್ ಕುಲಕರ್ಣಿ ಅವರು ಮೊದಲು ದೇವರ ಮೊರೆ ಹೋದರು. ಕಾರಾಗೃಹದ ಚೆಕ್ ಪೋಸ್ಟ್ ಬಳಿ ಇರುವ ಪ್ರಸಿದ್ಧ ಜಡೆ ಮುನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ದೇವರಿಗೆ ಈಡುಗಾಯಿ (ಕಾಯಿ) ಹೊಡೆದು ನಮಸ್ಕರಿಸಿದರು. ಸಂಕಷ್ಟದ ಸಮಯದಲ್ಲಿ ತಮಗೆ ದೈವಬಲ ಸಿಕ್ಕಿದೆ ಎಂಬ ಭಾವನೆಯೊಂದಿಗೆ ಅವರು ಕೆಲಕಾಲ ಪ್ರಾರ್ಥನೆ ಸಲ್ಲಿಸಿದರು. ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗುವ ಸುದ್ದಿ ತಿಳಿಯುತ್ತಿದ್ದಂತೆಯೇ ನೂರಾರು ಅಭಿಮಾನಿಗಳು ಮತ್ತು ಬೆಂಬಲಿಗರು ಪರಪ್ಪನ ಅಗ್ರಹಾರದ ಬಳಿ ಜಮಾಯಿಸಿದ್ದರು. ಶಾಸಕರು ಹೊರಬರುತ್ತಿದ್ದಂತೆಯೇ ಜಯಘೋಷ ಹಾಕಿದ ಅಭಿಮಾನಿಗಳು, ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಸ್ವಾಗತಿಸಿದರು. ಪರಸ್ಪರ ಸಿಹಿ ತಿನ್ನಿಸಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಮಾಡಿದರು.

ಜಾಮೀನಿನ ಷರತ್ತುಗಳೇನು?

ಯೋಗೇಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿನ್ನೆ (ಫೆಬ್ರವರಿ 27) ವಿನಯ್ ಕುಲಕರ್ಣಿಯವರಿಗೆ ಜಾಮೀನು ಮಂಜೂರು ಮಾಡಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೆಲವು ಕಠಿಣ ಷರತ್ತುಗಳನ್ನು ವಿಧಿಸಿದೆ. 5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಶೂರಿಟಿಗಳನ್ನು ಒದಗಿಸಬೇಕು. ಒಟ್ಟು ಏಳು ಪ್ರಮುಖ ಷರತ್ತುಗಳನ್ನು ವಿಧಿಸಲಾಗಿದ್ದು, ನ್ಯಾಯಾಲಯದ ಅನುಮತಿ ಇಲ್ಲದೆ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಬಾರದು ಎಂದು ತಿಳಿಸಲಾಗಿದೆ. ಈ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಜೈಲು ಅಧಿಕಾರಿಗಳು ಅವರನ್ನು ಬಿಡುಗಡೆ ಮಾಡಿದ್ದಾರೆ.

ಬಿಡುಗಡೆಯ ನಂತರ ಮೊದಲ ಪ್ರತಿಕ್ರಿಯೆ:

ಜೈಲಿನಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ ಅವರು ಭಾವುಕರಾದರು. ‘ಸುಪ್ರೀಂ ಕೋರ್ಟ್ ನನಗೆ ನ್ಯಾಯ ನೀಡಿದೆ. ನಾನು ಜೈಲಿಗೆ ಹೋದ ಕಾರಣ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ತುಂಬಾ ಹಿನ್ನಡೆಯಾಗಿದೆ. ಕ್ಷೇತ್ರದ ಜನತೆ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಇನ್ನು ಮುಂದೆ ನಾನು ಸಂಪೂರ್ಣವಾಗಿ ಕ್ಷೇತ್ರದ ಜನರ ಸೇವೆಯಲ್ಲಿ ತೊಡಗಿಕೊಳ್ಳುತ್ತೇನೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಕೋರ್ಟ್ ವಿಧಿಸಿರುವ ಎಲ್ಲಾ ಷರತ್ತುಗಳನ್ನು ನಾನು ಶಿರಸಾವಹಿಸಿ ಪಾಲಿಸುತ್ತೇನೆ’ ಎಂದು ತಿಳಿಸಿದರು.

ಸುಮಾರು ವರ್ಷಗಳ ಕಾಲ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸುತ್ತಿರುವ ವಿನಯ್ ಕುಲಕರ್ಣಿ ಅವರಿಗೆ ಈ ಬಿಡುಗಡೆಯು ತಾತ್ಕಾಲಿಕ ನೆಮ್ಮದಿ ನೀಡಿದೆ. ಸದ್ಯ ಅವರು ಬೆಂಗಳೂರಿನಿಂದ ನೇರವಾಗಿ ಧಾರವಾಡಕ್ಕೆ ತೆರಳುವ ಸಾಧ್ಯತೆ ಇದೆ.



Source link

Leave a Reply

Your email address will not be published. Required fields are marked *