ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರವಾಗಲಿವೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ಲಾರಿ ಅಥವಾ ಭಾರೀ ವಾಹನಗಳು ಚಾಲನೆ ಮಾಡುವವರಿಗೆ ಒಂದಲ್ಲ ಒಂದು ರೀತಿ ಒತ್ತಡದ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳು ನೀವು ಆತ್ಮವಿಶ್ವಾಸ ಕಳೆದುಕೊಂಡಿರುವುದು ಮುಖ್ಯವಾಗುತ್ತದೆ. ಕ್ರೆಡಿಟ್ ಕಾರ್ಡ್ ಗಾಗಿ ಅಪ್ಲೈ ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ನೀವು ನಿರೀಕ್ಷೆ ಕೂಡ ಮಾಡಿದರದಂಥ ಹಣ ಕೈ ಸೇರಲಿದೆ. ತಿಂಗಳಿಗೆ ಇಂತಿಷ್ಟು ಆದಾಯ ಬರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಯೋಚಿಸುತ್ತಾ ಇರುವವರು ಅದಕ್ಕೆ ಬೇಕಾದ ಪ್ರಯತ್ನ ಆರಂಭಿಸುತ್ತೀರಿ. ಸಂಗಾತಿ ಜೊತೆಗೆ ಕಾರಣದಿಂದ ಸಣ್ಣ ಪುಟ್ಟ ಮನಸ್ತಾಪ ಆಗಬಹುದು. ಆದರೆ ಇದನ್ನು ಕೂತು ಮಾತನಾಡುವ ಮೂಲಕ ಪರಿಹರಿಸಿಕೊಳ್ಳುತ್ತೀರಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ನಿಮ್ಮಷ್ಟಕ್ಕೆ ನೀವು ಅಂತಿದ್ದರೂ ಕೆಲವು ವಾದ- ವಿವಾದಗಳಿಗೆ ಕೆಲವರು ಎಳೆಯುತ್ತಾರೆ. ದೊಡ್ಡ ಗುಂಪಿನಲ್ಲಿ ಜನರು ಇರುವ ಕಡೆಗೆ ನೀವು ಹೋಗದಿರುವುದು ಉತ್ತಮ. ಇದನ್ನು ಮೀರಿಯೂ ಅಂಥ ಸ್ಥಳದಲ್ಲಿ ನೀವು ಇದ್ದೀರಿ ಅಂತಾ ಮೌನವಾಗಿ ಇರುವುದು ಕ್ಷೇಮ. ಸಹನೆ ಇಟ್ಟುಕೊಂಡು ಬಹಳ ಸಮಯದಿಂದ ಕಾಯುತ್ತಾ ಬಂದಿದ್ದ ಸಾರ್ಥಕ ಎಂಬಂತೆ ಕೆಲವು ಕಾರ್ಯಗಳು ನಿಮ್ಮಂತೆಯೇ- ನಿಮಗೆ ಬೇಕಾದಂತೆಯೇ ಆಗಲಿದೆ.
ಲೇಖನ- ಸ್ವಾತಿ ಎನ್.ಕೆ.
ರಂದು ಪ್ರಕಟಿಸಲಾಗಿದೆ – 12:20 am, ಭಾನುವಾರ, 1 ಮಾರ್ಚ್ 26