Headlines

Maharashtra Blast: ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು

Maharashtra Blast: ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು


ನಾಗ್ಪುರ, ಮಾರ್ಚ್ 01: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಮೇಶ್ವರ ತಾಲೂಕಿನ ರಾಲ್ಗಾಂವ್ ಬಳಿ ಘಟನೆ ಸಂಭವಿಸಿದೆ. ಸ್ಫೋಟಕಗಳನ್ನು ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟವಾಗಿದೆ. ಘಟನೆಯಲ್ಲಿ ಮಹಿಳೆಯರು ಸೇರಿ 15 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. 18 ಜನರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು.

ಕಟೋಲ್ ತಹಸಿಲ್‌ನ ರೌಲ್‌ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್‌ಬಿಎಲ್ ಎನರ್ಜಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ . ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಗ್ಗೆ 7 ರಿಂದ 7.15 ರ ನಡುವೆ ಈ ಘಟನೆ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಶೀಘ್ರದಲ್ಲೇ ಹೇಳಿಕೆ ನೀಡುವುದಾಗಿ ಕಂಪನಿಯ ಅಧಿಕಾರಿಯೊಬ್ಬರು ಬಯಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *