
ಈ ಘಟನೆಯ ಫೋಟೋಗಳನ್ನು ಹಂಚಿಕೊಂಡಿರುವ ಜೆಡಿಎಸ್, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ‘ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಕಳಪೆ! ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಉದ್ಘಾಟನೆಗೊಂಡು ತಿಂಗಳು ಸಹ ಕಳೆದಿಲ್ಲ, ಆಗಲೇ ಮೇಲ್ಚಾವಣಿ ಕುಸಿದಿದೆ. ಕಲ್ಯಾಣ ಕರ್ನಾಟಕ ಭಾಗದ ಜನರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಇಂತಹ ಕಳಪೆ ಕಾಮಗಾರಿಗಳಿಂದ ವ್ಯರ್ಥವಾಗುತ್ತಿದೆ’ ಎಂದು ಜೆಡಿಎಸ್ ಆರೋಪಿಸಿದೆ. ಅಲ್ಲದೆ, ವಿದ್ಯಾರ್ಥಿನಿಯ ಪ್ರಾಣಕ್ಕೆ ಅಪಾಯ ಬಂದಿದ್ದರೂ ಸರ್ಕಾರ ಮೌನವಾಗಿರುವುದು ಸರಿಯಲ್ಲ ಎಂದು ಟೀಕಿಸಿದೆ.
ಕಮಿಷನ್ @INCKarnataka ಸರ್ಕಾರದಲ್ಲಿ ಎಲ್ಲವೂ ಕಳಪೆ !
ಸಚಿವ @PriyankKharge ಅವರಿಂದ ಕಲಬುರಗಿಯ ಪೂರ್ವ ಪರೀಕ್ಷಾ ತರಬೇತಿ ಕೇಂದ್ರ (ಪ್ರಬುದ್ಧ ಅಕಾಡೆಮಿ) ಉದ್ಘಾಟನೆಗೊಂಡು ತಿಂಗಳು ಸಹ ಕಳೆದಿಲ್ಲ.
ಕಳಪೆ ಕಾಮಗಾರಿಯಿಂದ ಮೇಲ್ಚಾವಣಿ ಕುಸಿದು ಬಿದ್ದು, ವಿದ್ಯಾರ್ಥಿನಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಕಲ್ಯಾಣ ಕರ್ನಾಟಕ… https://t.co/YVk9kIUSSDpic.twitter.com/Twzsb5OuNf
— Janata Dal Secular (@JanataDal_S) March 2, 2026