ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಕಟ್ಟಡ
ಮೈಸೂರು, ಮಾರ್ಚ್ 02: ಇದುವರೆಗೆ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಬೇಕಾಗಿದ್ದ ಮೈಸೂರು ಭಾಗದ ರೋಗಿಗಳಿಗೆ ಶೀಘ್ರವೇ ಪ್ರಯಾಣದ ತಲೆಬಿಸಿ ತಪ್ಪಲಿದೆ, ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಈ ವರ್ಷದ ಅಂತ್ಯದವರೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಮೊದಲ ಹಂತದಲ್ಲಿ ರೇಡಿಯೇಷನ್ ಆಂಕಾಲಜಿ, ಮೆಡಿಕಲ್ ಆಂಕಾಲಜಿ ಮತ್ತು ಸರ್ಜಿಕಲ್ ಆಂಕೊಲಾಜಿ ವಿಭಾಗಗಳು ಪ್ರಾರಂಭವಾಗಲಿವೆ, ಮುಂದಿನ ದಿನಗಳಲ್ಲಿ ಸೇವೆಯ ವಿಸ್ತರಣೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹಾಗೂ ಸೆಂಟರ್ ಫಾರ್ ಡಿಸೀಸಸ್ ಇನ್ ಪಾರ್ ಮ್ಯಾಟಿಕ್ಸ್ ಆಂಡ್ ರಿಸರ್ಚ್ ವರದಿ ಪ್ರಕಾರ, ಕರ್ನಾಟಕದಲ್ಲಿ ಸುಮಾರು 89,000 ಹೊಸ ಕ್ಯಾನ್ಸರ್ ಪ್ರಕರಣಗಳು ದಾಖಲಾಗಿವೆ, ಸುಮಾರು 2.5 ಲಕ್ಷ ಜನರು ಈ ಕಾಯಿಲೆಯಿಂದ ಬದುಕುತ್ತಿದ್ದಾರೆ. ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಸರ್ಕಾರ ನಡೆಸುತ್ತಿರುವ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೆಚ್ಚಿನ ರೋಗಿಗಳ ಭೇಟಿ ನೀಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ದುಬಾರಿಯಾಗಿರುವುದರಿಂದ ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಆಸ್ಪತ್ರೆಯ ಮೇಲೆ ಅವಲಂಬಿತರಾಗಿದ್ದಾರೆ. ಈ ಚಿಕಿತ್ಸೆಗಾಗಿ ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಒತ್ತಡವನ್ನು ಕಡಿಮೆ ಮಾಡಲು, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಅನ್ನು ಸ್ಥಾಪಿಸಲು ಮೈಸೂರು ಸರ್ಕಾರ ಯೋಜಿಸಿದೆ.
ಇದನ್ನೂ ಓದಿ: ಅಸಲಿ ಬದಲಿಗೆ ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು!
ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2023ರಲ್ಲಿ ಚಾಲನೆ ನೀಡಿದ್ದರು. ಪ್ರಾರಂಭದಲ್ಲಿ 100 ಹಾಸಿಗೆಗಳ ಸಾಮರ್ಥ್ಯದಿಂದ ಆಸ್ಪತ್ರೆ ಪ್ರಾರಂಭವಾಗಲಿದೆ, ಮುಂದಿನ ವರ್ಷದ ಸಾಮರ್ಥ್ಯಕ್ಕೆ ಚಿಂತನೆ ಇದೆ. ಕೆಆರ್‌ಎಸ್ ರಸ್ತೆ ಸಮೀಪದ ಪಿಕೆಟಿಬಿ ಸ್ಯಾನಟೋರಿಯಂ ಹಿಂಭಾಗದ ಐದು ಏಕರೆ ಜಾಗದಲ್ಲಿ ಈ ಕೇಂದ್ರ ನಿರ್ಮಾಣವಾಗುತ್ತಿದೆ. ಸುಮಾರು 123 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಶೇ.75ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ಆಸ್ಪತ್ರೆಯ ನಿರ್ಮಾಣದಿಂದ ಮೈಸೂರಿನಿಂದ ಮಂಡ್ಯ, ಹಾಸನ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಗೆ ಜನರಿಗೆ ಅನುಕೂಲವಾಗಿದೆ.
2025ರ ಅಂಕಿಅಂಶಗಳ ಪ್ರಕಾರ ಮೈಸೂರು ಜಿಲ್ಲೆಯಲ್ಲಿ 5,035 ಪುರುಷರು ಹಾಗೂ 6,839 ಮಹಿಳೆಯರು ಕ್ಯಾನ್ಸರ್‌ನಿಂದ ಬದುಕುತ್ತಿದ್ದಾರೆ. ಚಾಮರಾಜನಗರದಲ್ಲಿ 1,533 ಪುರುಷರು ಹಾಗೂ 2,108 ಮಹಿಳೆಯರು, ಹಾಸನದಲ್ಲಿ 2,589 ಪುರುಷರು ಹಾಗೂ 3,512 ಮಹಿಳೆಯರು, ಮಂಡ್ಯ ಜಿಲ್ಲೆಯಲ್ಲಿ 2,630 ಪುರುಷರು ಹಾಗೂ 3,528 ಮಹಿಳೆಯರು ಕ್ಯಾನ್ಸರ್ ಪೀಡಿತರಾಗಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.