ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು?

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಸಿದ್ದರಾಮಯ್ಯ ಆಗ್ರಹ: ಪ್ರಧಾನಿ ಮೋದಿಗೆ ಬರೆದ 2 ಪುಟಗಳ ಪತ್ರದಲ್ಲಿರೋದೇನು?


ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರಚಿತ್ರದ ಕ್ರೆಡಿಟ್ ಮೂಲ: ಗೂಗಲ್

ಬೆಂಗಳೂರು, ಮಾರ್ಚ್ 02: ಮಧ್ಯಪ್ರಾಚ್ಯದ ದೇಶಗಳಲ್ಲಿ ಯುದ್ಧದ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವಂತೆ ಕಾಣುವ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡು ಪುಟಗಳ ಪತ್ರ ಬರೆದಿದ್ದಾರೆ. ಮಧ್ಯಪ್ರಾಚ್ಯ ಭಾಗದಲ್ಲಿ ನೆಲೆಸಿರುವ ಕನ್ನಡಿಗರು ಮತ್ತು ಭಾರತೀಯರ ಬಗ್ಗೆ ಸಿಎಂ ಆತಂಕ ವ್ಯಕ್ತಪಡಿಸಿದ್ದು, ಅನೇಕ ದೇಶಗಳು ತಮ್ಮ ವಾಯುಮಾರ್ಗವನ್ನು ಬಂದ್ ಮಾಡಿದ್ದರಿಂದ ವಿಮಾನ ಸಂಚಾರ ಸ್ಥಗಿತಗೊಂಡಿದೆ. ದುಬೈನಂತಹ ಪ್ರಮುಖ ಸ್ಥಳಗಳಲ್ಲಿ ಸಾವಿರಾರು ಕನ್ನಡಿಗರು ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಅವರ ರಕ್ಷಣೆಗೆ ಕೂಡಲೇ ಮುಂದಾಗಬೇಕು ಎಂದು ಪತ್ರದಲ್ಲಿ ನಮೂದಿಸಲಾಗಿದೆ.

ಪ್ರಧಾನಿಗೆ ಬರೆದ ಸಿಎಂ ಪತ್ರದಲ್ಲೇನಿದೆ?

ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ವೇಗವಾಗಿ ಹೆಚ್ಚುತ್ತಿರುವ ಭೌಗೋಳಿಕ-ರಾಜಕೀಯ ಉದ್ವಿಗ್ನತೆ ಮತ್ತು ಅದರ ಪರಿಣಾಮವಾಗಿ ಆ ಪ್ರದೇಶಗಳಲ್ಲಿ ವಾಸಿಸುವ, ಉದ್ಯೋಗದಲ್ಲಿರುವ, ವಿದ್ಯಾಭ್ಯಾಸ ಮಾಡುತ್ತಿರುವ ಮತ್ತು ಪ್ರಯಾಣಕ್ಕೆ ತೆರಳುವ ಕನ್ನಡಿಗರು ಸೇರಿದಂತೆ ಭಾರತೀಯ ಪ್ರಜೆಗಳ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ನಾನು ಗಂಭೀರ ಆತಂಕವನ್ನು ವ್ಯಕ್ತಪಡಿಸುತ್ತೇನೆ.

ಇದನ್ನೂ ಓದಿ: ಮಧ್ಯ ಪ್ರಾಚ್ಯದಲ್ಲಿ ಯುದ್ಧ; ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ

ವಿಮಾನಯಾನ ಅನೇಕ ಸಚಿವಾಲಯದಿಂದ ಇತ್ತೀಚೆಗೆ ಹೊರಡಿಸಲಾದ ಸೂಚನೆಗಳ ಪ್ರಕಾರ, ಪಶ್ಚಿಮ ಏಷ್ಯಾದ ದೇಶಗಳು ತಮ್ಮ ವಾಯುಪ್ರದೇಶದ ನಿರ್ಬಂಧಗಳು ಮತ್ತು NOTAM ಪ್ರಕಟಿಸಿದ ಅಂತರರಾಷ್ಟ್ರೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಯುಎಇ (ದುಬೈ) ಸೇರಿದಂತೆ ಅನೇಕ ಕಡೆ ಕನ್ನಡಿಗರು ಸೇರಿದಂತೆ ಹಲವಾರು ಭಾರತೀಯರು ಸಿಲುಕಿದ್ದಾರೆ. ಪ್ರಸ್ತುತ ಘಟನೆಗಳಿಂದಾಗಿ ಅನಿಶ್ಚಿತತೆ ಮತ್ತು ಆತಂಕ ಹೆಚ್ಚಾಗಿರುತ್ತದೆ. ಈ ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತುರ್ತು ಸಮನ್ವಯ ಸಾಧಿಸಿ ಕನ್ನಡಿಗರು ಸೇರಿದಂತೆ ಭಾರತೀಯರ ಸುರಕ್ಷತೆ ಹಾಗೂ ಉಡುಗೆ ಸ್ವದೇಶಕ್ಕೆ ಮರಳಿಸುವ ಕ್ರಮಗಳ ಕುರಿತು ಮನವಿ ಮಾಡಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ವಿಮಾನಯಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸಹಾಯಕ್ಕೆ ವಿನಂತಿಸಲಾಗಿದೆ.

ಪರಿಸ್ಥಿತಿಯ ಗಂಭೀರತೆ ಮತ್ತು ಅಸ್ಥಿರತೆಯನ್ನು ಮನಗಂಡು, ಕನ್ನಡಿಗರು ಸೇರಿದಂತೆ ಭಾರತೀಯ ಪ್ರಜೆಗಳ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ಪ್ರಭಾವಿತ ಪ್ರದೇಶಗಳಲ್ಲಿ ಭಾರತೀಯ ರಾಯಭಾರ ಕಚೇರಿ ಮತ್ತು ವಾಣಿಜ್ಯ ದೂತಾ ರಕ್ಷಣಾ ಸಂಸ್ಥೆಗಳ ಮೂಲಕ ನಿರಂತರ ಮೇಲ್ವಿಚಾರಣೆ, ಕ್ರಮಗಳು ಮತ್ತು ಮಾರ್ಗದರ್ಶನ ನೀಡಬೇಕು. ಅಗತ್ಯವಿದ್ದಲ್ಲಿ ಆದ್ಯತೆಯ ಆಧಾರದ ಮೇಲೆ ವಿಶೇಷ ವಿಮಾನಗಳ ಮೂಲಕ ಹಾಗೂ ಸಮಯೋಚಿತವಾಗಿ ನಾಗರಿಕರನ್ನು ವಾಪಾಸು ಕರೆತರಲು ಸಿದ್ಧತೆ ಮಾಡಿಕೊಳ್ಳಬೇಕು.ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ, ರಾಜ್ಯ ಸರ್ಕಾರಗಳು ಮತ್ತು ವಿಮಾನಯಾನ ಸಂಸ್ಥೆಗಳ ನಡುವೆ ಸಮನ್ವಯ ಸಾಧಿಸಲು ಅಂತರ್-ಸಚಿವಾಲಯ ಕಾರ್ಯಪಡೆ ರಚನೆ ಆಗಿರುತ್ತದೆ. ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರ ನೋಂದಣಿ, ಟ್ರ್ಯಾಕಿಂಗ್ ಮತ್ತು ಕುಟುಂಬಗಳಿಗೆ ತಕ್ಷಣದ ಮಾಹಿತಿ ನೀಡುವ ಸೂಚನೆ ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆ ರೂಪಿಸುವುದು ಸೇರಿದಂತೆ ಯಾನ ಸಂಸ್ಥೆಗಳ ಹೆಚ್ಚುವರಿ ಶುಲ್ಕ ಮನ್ನಾ ಹಾಗೂ ಅಗತ್ಯವಿದ್ದಲ್ಲಿ ಮಾನವೀಯ ನೆರವು ಒದಗಿಸುವಂತೆ ಸಿದ್ದರಾಮಯ್ಯನವರು ಇದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 6:24 pm, ಸೋಮ, 2 ಮಾರ್ಚ್ 26





Source link

Leave a Reply

Your email address will not be published. Required fields are marked *