Headlines

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ


ಮಲ್ಲಿಕಾರ್ಜುನ ಮುತ್ಯಾಚಿತ್ರದ ಕ್ರೆಡಿಟ್ ಮೂಲ: google

ಯಾದಗಿರಿ, ಮಾರ್ಚ್ 02: ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ (ಮಲ್ಲಿಕಾರ್ಜುನ ಮುತ್ಯಾ) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಭಕ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಎಫ್ ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯನ್ನು ಜಡ್ಜ್ ದಾಖಲಿಸಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆಯ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ.

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಹಿನ್ನಲೆ ಇಂದು ಶಹಾಪುರ ಜೆಎಂಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸಂತ್ರಸ್ತ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಬಳಿಕ ಬಾಲಕಿ ಹೇಳಿಕೆಯ ದಾಖಲು ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಗೆ ಸಲ್ಲಿಸದಿದ್ದರೆ. ಹೀಗಾಗಿ ಸಂತ್ರಸ್ತ ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾ ಭವಿಷ್ಯ ನಿಂತಿದೆ.

ಇದನ್ನೂ ಓದಿ: ಪೋಕ್ಸೋ ಕೇಸ್:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್

ಇನ್ನು ತಮ್ಮ ವಿರುದ್ಧದ ಪೋಕ್ಸೋ ಕೇಸ್ ರದ್ದು ಕೋರಿ, ಮಲ್ಲಿಕಾರ್ಜುನ ಮುತ್ಯಾ ಕೂಡ ಇತ್ತೀಚೆಗೆ ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆಯನ್ನ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿತ್ತು. ಮಲ್ಲಿಕಾರ್ಜುನ ಮುತ್ಯಾ ತೆರೆಮರೆಯಲ್ಲೇ ಇದ್ದು, ಇತ್ತೀಚೆಗೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಆ ಮೂಲಕ ತಾವು ಎಲ್ಲಿಗೆ ಹೋಗುತ್ತಿದ್ದೇನೆ ಎನ್ನುವುದನ್ನು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಬಾಲಕಿ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು

ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ಹರಿಬಿಟ್ಟ ಬೆನ್ನಲ್ಲೇ ಸಂತ್ರಸ್ತ ಬಾಲಕಿಯ ಪೋಷಕರ ಕೂಡ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಕಿಡಿಗೇಡಿಗಳು ವಿಡಿಯೋವನ್ನು ತಿರುಚಿ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಜೊತೆಗೆ ಅಪ್ಪಾ ಅವರದ್ದು ಯಾರೂ ತಪ್ಪಿಲ್ಲ, ಅವರು ದೇವರ ಸಮಾನ ಎಂದು ಹೇಳಿದ್ದರು.

ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ಭಕ್ತ ಸಮೂಹ

ಇನ್ನು ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ಭಕ್ತ ಸಮೂಹ ನಿಂತಿದೆ. ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಹೋರಾಟ ಸಮಿತಿ ಹಾಗೂ ಮಠದ ಭಕ್ತರ ನೇತೃತ್ವದಲ್ಲಿ ಇಂದು ಕಲಬುರಗಿಯಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ಮಲ್ಲಿಕಾರ್ಜುನ ಮುತ್ಯಾ ಭಾವಚಿತ್ರ ಹಿಡಿದು ಅವರ ಜೊತೆಯಲ್ಲಿ ನಾವು ನಿಲ್ಲುತ್ತೇವೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಕ್ಕೆ ಸಾಥ್ ನೀಡಿದ ವಿವಿಧ ಮಠಾಧೀಶರಿಂದ ಪೋಕ್ಸೋ ಕೇಸ್ ರದ್ದು ಮಾಡುವಂತೆ ಕಾಣುತ್ತಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *