ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಬಳಿಕ ಕ್ರಿಕೆಟಿಗರು 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಆಫ್ಘಾನ್ ಎದುರು ಭಾರತ ತಂಡವು ತವರಿನಲ್ಲಿ ಒಂದು ಟೆಸ್ಟ್ ಹಾಗೂ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಏಕದಿನ ಸರಣಿಯಲ್ಲಿ ಕೊಹ್ಲಿ-ರೋಹಿತ್ ಕಣಕ್ಕಿಳಿಯಲಿದ್ದಾರೆ

ಸಾಕಷ್ಟು ಸಮಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭಾರತ ತಂಡದ ಜೆರ್ಸಿಯಲ್ಲಿ ನೋಡೋದು ಯಾವಾಗ ಎಂದು ಕುತೂಹಲದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಬಿಸಿಸಿಐ ಗುಡ್ ನ್ಯೂಸ್ ನೀಡಿದೆ.

ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಜೂನ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು, 3 ಏಕದಿನ ಹಾಗೂ ಏಕೈಕ ಟೆಸ್ಟ್ ಪಂದ್ಯ ಆಡಲಿದೆ. ಇದರ ಬಗ್ಗೆ ಬಿಸಿಸಿಐ ಸೋಮವಾರ ಮಾಹಿತಿ ಒದಗಿಸಿದೆ.

ಏಕೈಕ ಟೆಸ್ಟ್ ಪಂದ್ಯ ಜೂನ್ 6ರಿಂದ 10ರ ವರೆಗೆ ನವ ಚಂಡೀಗಢದ ಮುಲ್ಲಾನ್‌ಪುರ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಈ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿರುವುದಿಲ್ಲ.

ಇತ್ತೀಚೆಗೆ ಕೊನೆಗೊಂಡ ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ಈ ಪಂದ್ಯಕ್ಕಾಗಿ ಭಾರತ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.

ಇನ್ನು, 3 ಪಂದ್ಯಗಳ ಏಕದಿನ ಸರಣಿ ಜೂ.14ಕ್ಕೆ ಆರಂಭಗೊಳ್ಳಲಿದೆ. ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. 2ನೇ ಪಂದ್ಯ ಜೂ.17ರಂದು ಲಖನೌ ಕ್ರೀಡಾಂಗಣದಲ್ಲಿ ನಡೆಯಲಿದ್ದು, 3ನೇ ಪಂದ್ಯಕ್ಕೆ ಜೂ.20ರಂದು ಚೆನ್ನೈನ ಚೆಪಾಕ್ ಕ್ರೀಢಾಂಗಣ ಆತಿಥ್ಯ ವಹಿಸಲಿದೆ ಎಂದು ಬಿಸಿಸಿಐ ತಿಳಿಸಿದೆ.

ಈ ಮೂರು ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಜೆರ್ಸಿ ತೊಟ್ಟು ಮೈದಾನಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.

Source link
ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ! ಮತ್ತೆ ಮೈದಾನಕ್ಕಿಳಿಯಲು ರೋ-ಕೋ ಜೋಡಿ ರೆಡಿ