ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ


ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್ ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ನ್ಯಾಯಾಲಯಕ್ಕೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಈ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (ಹಾಕ್ಸ್ ಕಾಲ್) ಎಂದು ದೃಢಪಟ್ಟಿದೆ. ಇಂದು (ಮಾರ್ಚ್ 3, 2026) ಬೆಳಿಗ್ಗೆ ಕೋರ್ಟ್‌ನ ಅಧಿಕೃತ ಇ-ಮೇಲ್ ಸಂದೇಶ ಬಂದಿತ್ತು. ಇನ್ನು ಈ ಬೆದರಿಕೆ ಇ-ಮೇಲ್ ತಮಿಳು ಭಾಷೆಯಲ್ಲಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಲಸೂರು ಗೇಟ್ ಠಾಣೆಗೆ ಧಾವಿಸಿದರು. ಬಾಂಬ್ ನಿಷ್ಕ್ರಿಯ ದಳ (BDS) ಮತ್ತು ಶ್ವಾನದಳದೊಂದಿಗೆ ಕೋರ್ಟ್‌ನ ಪ್ರತಿ ಕೊಠಡಿ, ಕಾರಿಡಾರ್ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಯಿತು.

ಇದನ್ನೂ ಓದಿ: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು

ಸುದೀರ್ಘ ಪರಿಶೀಲನೆಯ ನಂತರ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಇಲ್ಲ. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಕಿಡಿಗೇಡಿಗಳು ಈ ರೀತಿ ಮಾಡಿದ್ದರೆ ಆಗಬೇಕು. ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳ ಪತ್ತೆಗಾಗಿ ಸೈಬರ್ ಕ್ರೈಂ ವಿಭಾಗದ ನೆರವು ಪಡೆಯಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *