
ಒಂದು ಸಣ್ಣ ತಟ್ಟೆಯಲ್ಲಿ ಸ್ವಲ್ಪ ಕಲ್ಲು ಉಪ್ಪು (ರಾಕ್ ಸಾಲ್ಟ್) ಇಟ್ಟು ನಿಮ್ಮ ಮನೆಯ ಅಥವಾ ಕೆಲಸದ ಜಾಗದ ಮೂಲೆಯಲ್ಲಿಡಿ. ಇದು ಸುತ್ತಲಿನ ನಕಾರಾತ್ಮಕತೆಯನ್ನು ತೋರಿಸುತ್ತದೆ. ಸಂಜೆ ಅದನ್ನು ನೀರಿನಲ್ಲಿ ವಿಸರ್ಜಿಸಿ. ಈ ದಿನ ಅಪ್ಪಿತಪ್ಪಿಯೂ ಕಪ್ಪು ಬಣ್ಣದ ಬಟ್ಟೆ ಧರಿಸಬೇಡಿ
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕೇಳುವುದಿಲ್ಲ. ಉದ್ಯೋಗ ಅಥವಾ ವೃತ್ತಿಗೆ ಅಂದುಕೊಳ್ಳುವುದು ಕೆಲವು ಫಲಿತಾಂಶ ಬರುವುದರಿಂದ ವಿಚಲಿತರಾಗುವಂತೆ ಆಗಲಿದೆ. ಸ್ವಲ್ಪ ದೂರದ ಸ್ಥಳಕ್ಕೆ ಹೋಗಿ ಏಕಾಂಗಿಯಾಗಿ ಸಮಯ ಕಳೆಯೋಣ ಎಂದೆನಿಸಲಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕಾಗದ- ದಾಖಲೆ ಪತ್ರಗಳ ವ್ಯವಹಾರ ಸಲೀಸಾಗಿ ಆಗಲಿದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ಪ್ಲಾನಿಂಗ್- ಪರಿಶ್ರಮ ಜೊತೆಯಾಗಿ ಅತ್ಯುತ್ತಮ ಫಲಿತಾಂಶ ದೊರೆಯಲಿದೆ. ದಂಪತಿ ಮಧ್ಯೆ ಸಂತೋಷಕರವಾದ ಸಮಯವನ್ನು ಕಳೆಯುವ ಯೋಗವಿದೆ. ನಿಮ್ಮ ಬಳಿ ಎಷ್ಟು ಹಣ ಇದೆಯೋ ಅಷ್ಟಕ್ಕೆ ಮಾತ್ರ ಸೀಮಿತಗೊಳ್ಳಿ. ಕಡಿಮೆ ಬಡ್ಡಿ- ದೀರ್ಘಾವಧಿ ಹೀಗೆ ಏನೇ ಆದರೂ ಸಾಲ ಪಡೆದುಕೊಳ್ಳಬೇಡಿ. ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಎಷ್ಟು ಸಣ್ಣ ಪ್ರಮಾಣದ ಕೆಲಸವಾದರೂ ನೀವೇ ಪೂರ್ಣಗೊಳಿಸುವುದು ಉತ್ತಮ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ನಿಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ವರ್ಗಾವಣೆ ಮಾಡಬೇಡಿ. ಒಂದು ವೇಳೆ ತಾಯಿ ಅಥವಾ ತಾಯಿ ಸಮಾನರಾದವರ ಆರೋಗ್ಯಕ್ಕೆ ಚಿಂತೆ ಆಗಲಿದೆ. ಫಾಲೋಅಪ್ ಚೆಕ್ ಅನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ. ಹೂಡಿಕೆ ವಿಚಾರಕ್ಕೆ ಬಂದರೆ ಹೆಚ್ಚಿನ ಅಪಾಯ ಇರುವಂತಹದ್ದು ಒಳ್ಳೆಯದು. ಅನುಭವಿಗಳ ಮಾರ್ಗದರ್ಶನ- ಸಲಹೆ ಕಂಡುಬಂದಲ್ಲಿ ಪಡೆದುಕೊಳ್ಳಿ.
ಲೇಖನ- ಸ್ವಾತಿ ಎನ್.ಕೆ.