Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ

Mojtaba Khamenei: ಇರಾನ್​​ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ


ಟೆಹ್ರಾನ್, ಮಾರ್ಚ್ 04: ಇರಾನ್(ಇರಾನ್)ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಬಾ ನೇಮಕಗೊಂಡಿದ್ದಾರೆ. ಇರಾನ್ ಸರ್ವೋಚ್ಚ ನಾಯಕನಾಗಿದ್ದ ಅಲಿ ಖಮೇನಿ ಇಸ್ರೇಲ್, ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಭಾಗವಹಿಸಿದ್ದರು. ಈಗ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಫೆಬ್ರವರಿ 28 ರಂದು ಟೆಹ್ರಾನ್‌ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಅವರ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಯಿತು.

ಆ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಈ ನಂತರ ಇರಾನ್ ಏಳು ದಿನಗಳ ಸಾರ್ವಜನಿಕ ರಜೆಗೆ 40 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ದೇಶಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ, ಪ್ರಮುಖ ನಗರಗಳು ಮತ್ತು ಸರ್ಕಾರಿ ಕಟ್ಟಡಗಳ ಹೊರಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಮೊಜ್ತಬಾ ಖಮೇನಿ ಯಾರು?
ಮೊಜ್ತಬಾ ಖಮೇನಿ 1969ರಲ್ಲಿ ಮಶಾದ್ ಜನಿಸಿದರು, ಧಾರ್ಮಿಕ ಶಿಕ್ಷಣವನ್ನು ಪಡೆದರು. ಇರಾನ್-ಇರಾಕ್ ಯುದ್ಧದ ಅಂತಿಮ ಹಂತಗಳಲ್ಲಿ ಅವರು ಕ್ರಾಂತಿಕಾರಿ ಗಾರ್ಡ್‌ನಲ್ಲಿಯೂ ಸೇವೆ ಸಲ್ಲಿಸಿದ್ದರು. ಅವರನ್ನು ಬಹಳ ಹಿಂದಿನಿಂದಲೂ ತಂದೆ ತೆಗೆದುಕೊಳ್ಳುವ ನಿರ್ಧಾರಗಳ ಹಿಂದೆ ಇವರು ನಿಂತಿದ್ದರು, ಅವರಿಗೆ ತುಂಬಾ ಹತ್ತಿರವಾಗಿದ್ದರು. ಅವರು ಯಾವುದೇ ಸರ್ಕಾರಿ ಹುದ್ದೆಗಳನ್ನು ಹೊಂದಿಲ್ಲವಾದರೂ ಅವರು ತಮ್ಮ ತಂದೆಗೆ ವಿಶ್ವಾಸಾರ್ಹ ಸಲಹೆಗಾರರಾಗಿದ್ದಾರೆ. ಅವರು ಮಿಲಿಟರಿ ಮತ್ತು ಅರೆಸೈನಿಕ ಪಡೆಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು.

ಇರಾನ್‌ನ ಶಿಯಾ ದೇವಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯುನ್ನತ ಲೀಡರ್ ಅತ್ಯಂತ ಶಕ್ತಿಶಾಲಿ ಸ್ಥಾನವಾಗಿದೆ. ಈ ಹುದ್ದೆಯನ್ನು ಹೊಂದಿರುವ ವ್ಯಕ್ತಿ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿರುತ್ತಾರೆ ಮತ್ತು ದೇಶದ ಪ್ರಮುಖ ರಾಜಕೀಯ, ಮಿಲಿಟರಿ ಕಾರ್ಯತಂತ್ರದ ನಿರ್ಧಾರಗಳ ಮೇಲೆ ಅಂತಿಮ ನಿರ್ಧಾರವನ್ನು ಹೊಂದಿರುತ್ತಾರೆ.

ಇರಾನ್ ಪ್ರಸ್ತುತ ಮಿಲಿಟರಿ ಮತ್ತು ರಾಜಕೀಯ ಉದ್ವಿಗ್ನತೆಯ ಅವಧಿಯನ್ನು ಎದುರಿಸುತ್ತಿದೆ. ಮೊಜ್ತಾಬಾ ಅವರ ಸುಪ್ರೀಂ ಲೀಡರ್ ಆಗಿ ಬಡ್ತಿ ನೀಡಿರುವುದು ದೇಶವು ತನ್ನ ಪ್ರಸ್ತುತ ನೀತಿಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಸೂಚಿಸುತ್ತದೆ. ಆದಾಗ್ಯೂ, ಅಧಿಕೃತ ಘೋಷಣೆ ಮತ್ತು ಆಂತರಿಕ ಪ್ರತಿಕ್ರಿಯೆಗಳ ನಂತರವೇ ಈ ನಾಯಕತ್ವ ಬದಲಾವಣೆಯು ಇರಾನಿನ ರಾಜಕೀಯ ಮತ್ತು ಪ್ರಾದೇಶಿಕ ಚಲನವಲನದ ಮೇಲೆ ಯಾವ ಪರಿಣಾಮವು ಇನ್ನೂ ಸ್ಪಷ್ಟವಾಗಬೇಕಿದೆ.

ಮತ್ತಷ್ಟು ಓದಿ: ಇರಾನ್ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೇತನ್ಯಾಹು ಧನ್ಯವಾದ

2009ರಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಅವರ ಹೆಸರು ಕೇಳಿಬಂದಿತ್ತು, ಪ್ರತಿಭಟನೆಗಳನ್ನು ಕಠಿಣವಾಗಿ ಹತ್ತಿಕ್ಕುವಲ್ಲಿ ಅವರ ಪಾತ್ರವಿದೆ. ಈಗ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ನೇಮಿಸಿರುವುದು ದೇಶದ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. 1979ರ ಕ್ರಾಂತಿಯ ಸಮಯದಲ್ಲಿ ವಂಶಾವಳಿಯ ಆಧಾರದ ಮೇಲೆ ಅಧಿಕಾರ ವರ್ಗಾವಣೆಗೆ ವಿರೋಧವಿತ್ತು. ಹಾಗೆ ಅವರ ಆಯ್ಕೆಯನ್ನು ಪ್ರಶ್ನಿಸಲಾಗುತ್ತಿದೆ.

ಪ್ರಸ್ತುತ ಮಿಲಿಟರಿ ಬೆಂಬಲಕ್ಕಾಗಿ ಮೊಜ್ತಬಾ ಖಮೇನಿ ಅವರನ್ನು ಬಲಿಷ್ಠ ನಾಯಕ ಎಂದು ಪರಿಗಣಿಸಲಾಗಿದೆ. ಮುಂಬರುವ ದಿನಗಳು ಅವರ ನಾಯಕತ್ವ ದೇಶವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯುತ್ತದೆ ಎಂಬುದನ್ನು ನೋಡಬೇಕಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *