ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕ (ಇರಾನ್-ಇಸ್ರೇಲ್ ಸಂಘರ್ಷ) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಉಂಟಾಗುವುದರಿಂದ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇಂದು ಆ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ.
“ಸಿಕ್ಕಿಬಿದ್ದ ಪ್ರಯಾಣಿಕರು ಸಂಚಾರಕ್ಕೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ, ವಿಮಾನಯಾನ ಸಂಸ್ಥೆಗಳು ಕಡೆ ಹೆಚ್ಚುವರಿ ವಿಮಾನಗಳನ್ನು ನಿರ್ವಹಿಸುತ್ತಿವೆ.
ಇದನ್ನೂ ಓದಿ: ಮೊಜ್ತಾಬಾ ಖಮೇನಿ: ಇರಾನ್ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ
ಭಾರತೀಯ ವಿಮಾನಯಾನ ಸಂಸ್ಥೆಗಳು ಇಂದು ಇಂಡಿಗೋದಿಂದ 30 ಮತ್ತು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ನಿಂದ 23 ಸೇರಿದಂತೆ 58 ವಿಮಾನಗಳನ್ನು ಗಲ್ಫ್ ರಾಷ್ಟ್ರಗಳಿಗೆ ಕಳುಹಿಸಲಾಗುತ್ತಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ ಸಿಲುಕಿರುವ ಭಾರತೀಯ ಪ್ರಯಾಣಿಕರನ್ನು ಮರಳಿ ಕರೆತರಲು ಸ್ಪೈಸ್ಜೆಟ್ ಇಂದು ಯುಎಇಯಿಂದ 8 ವಿಶೇಷ ವಿಮಾನಗಳನ್ನು ನಿರ್ವಹಿಸಲಿದೆ. ಇದರಲ್ಲಿ 4 ದೆಹಲಿಗೆ, 3 ಮುಂಬೈಗೆ ಮತ್ತು 1 ಕೊಚ್ಚಿಗೆ ಇದೆ.
ಇದನ್ನೂ ಓದಿ: ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್
ಇಲ್ಲಿಯವರೆಗೆ, ಭಾರತೀಯ ವಿಮಾನಯಾನ ಸಂಸ್ಥೆಗಳು 1,221 ವಿಮಾನಗಳು ಮತ್ತು ವಿದೇಶಿ ವಿಮಾನಯಾನ ಸಂಸ್ಥೆಗಳು 388 ವಿಮಾನಗಳು ರದ್ದಾಗಿವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಫೆಬ್ರವರಿ 28 ರಿಂದ ಸಚಿವಾಲಯ ಒದಗಿಸಿದ ಅಂಕಿ-ಅಂಶಗಳ ಪ್ರಕಾರ ಮಂಗಳವಾರ ಭಾರತೀಯ ವಿಮಾನಯಾನ ಸಂಸ್ಥೆಗಳು 104 ಅಂತರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ