ಹೈದರಾಬಾದ್, ಮಾರ್ಚ್ 04: ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಬಾತ್ ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಸೇರಿ ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಾಲಕಿ ಯಾರನ್ನಾದರೂ ಪ್ರೇಮಿಸಿ ಮೋಸ ಹೋಗಿದ್ದಳೋ, ಅಥವಾ ಆಕೆಯ ಮೇಲಾದರೂ ಕಿರುಕುಳ ನಡೆದಿತ್ತೇ ಎಂಬ ಮಾಹಿತಿ ತಿಳಿದುಬಂದಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ