
ಬೆಂಗಳೂರಿನಲ್ಲಿ ಅಡುಗೆ ಮಾಡುವ ವಿಚಾರವಾಗಿ ಅತ್ತೆಯೊಂದಿಗೆ ನಡೆದ ಜಗಳದ ನಂತರ ಇಂಜಿನಿಯರ್ ಸೊಸೆ ಸುಷ್ಮಾ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪೋಷಕರು ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ನೀಡಿದ್ದು, ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಘಟನೆಯ ನಂತರ ಆರೋಪಿ ಅತ್ತೆ ಪರಾರಿಯಾಗಿದ್ದಾರೆ.
ಅತ್ತೆ ಸೊಸೆ ನಡುವೆ ಜಗಳ: ಸೊಸೆ ಸಾವಿಗೆ ಶರಣು
ಬೆಂಗಳೂರು: ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಸೊಸೆ ನಡುವೆ ಜಗಳ ನಡೆದು ಸೊಸೆ ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸುಷ್ಮಾ ಅರಿಗೆ 5 ವರ್ಷದ ಹಿಂದೆ ಪುನೀತ್ ಕುಮಾರ್ ಎಂಬುವವರ ಜತೆ ಮದುವೆಯಾಗಿತ್ತು. ದಂಪತಿಗೆ 4 ವರ್ಷದ ಮಗನೂ ಇದ್ದಾನೆ. ಈ ಹಿಂದೆ ಸುಷ್ಮಾ ಅವರು ಡೆಲ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಮನೆಯಲ್ಲಿ ಅತ್ತೆ ಸೊಸೆ ಮಧ್ಯೆ ಆಗಾಗ ಸಣ್ಣ ಪುಟ್ಟ ವಿಚಾರಗಳಿಗೆ ಸಂಬಂಧಿಸಿದಂತೆ ಗಲಾಟೆ ನಡೆಯುತ್ತಿತ್ತು. ಅಡುಗೆ ವಿಚಾರವಾಗಿ ಸೊಸೆ ಸುಷ್ಮಾ ಹಾಗು ಅತ್ತೆ ಕಲ್ಪನಾ ಮಧ್ಯೆ ಕಿತ್ತಾಟಗಳಾಗುತ್ತಿದ್ದವು. ಮಂಗಳವಾರ ಸಂಜೆ ಇದೇ ವಿಚಾರವಾಗಿ ಆರಂಭವಾದ ಜಗಳ ವಿಕೋಪಕ್ಕೆ ಹೋಗಿದ್ದು, ಸುಷ್ಮಾ ಆಘಾತಕಾರಿ ನಿರ್ಧಾರ ಕೈಗೊಂಡಿದ್ದಾರೆ. ಸುಷ್ಮಾ ಅವರ ಕುಟುಂಬದವರ ಪ್ರಕಾರ ಅತ್ತೆ ಕಲ್ಪನಾ ಸೊಸೆ ಸುಷ್ಮಾ ಅವರಿಗೆ ಅಡುಗೆ ಮಾಡುವುದಕ್ಕೆ ಬಿಡುತ್ತಿರಲಿಲ್ಲ, ಪ್ರತಿದಿನವೂ ಏನಾದರೊಂದು ಕಾರಣ ಹೇಳಿ ಆಕೆಗೆ ಕಿರುಕುಳ ನೀಡುತ್ತಿದ್ದರು. ಇದೇ ಕಾರಣಕ್ಕೆ ಸುಷ್ಮಾ ಅವರು ನೇಣು ಹಾಕಿಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ ಎಂದು ಸುಷ್ಮಾ ಪೋಷಕರು ಆರೋಪಿಸಿದ್ದಾರೆ.
ಘಟನೆಯ ಬಳಿಕ ಸುಷ್ಮಾ ಅವರ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಸುಷ್ಮಾ ಪತಿಯ ವಿರುದ್ಧ ವರದಕ್ಷಿಣೆ ಆರೋಪ ಮಾಡಿದ್ದಾರೆ. ಸುಷ್ಮಾ ಕುಟುಂಬದವರು ನೀಡಿದ ದೂರಿನ ಬಳಿಕ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಳಿಕ ಅತ್ತೆ ಕಲ್ಪನಾ ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ.
ಇದನ್ನೂ ಓದಿ: ರಸ್ತೆ ಬದಿ 4 ಚೀಲದಲ್ಲಿ ಗೋವುಗಳ ಕಳೆಬರ ಪತ್ತೆ: ರಸ್ತೆ ತಡೆದು ಪ್ರತಿಭಟಿಸಿದವರ ವಿರುದ್ಧ FIR
ವಿಶೇಷ ಮನವಿ:
ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ… ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ‘ಆತ್ಮ8ತ್ಯೆ’ ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:
Sahai Helpline – 080 2549 7777