ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ CRPF 38ನೇ ಬೆಟಾಲಿಯನ್ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದೆ. ಕರ್ತವ್ಯ ನಿರ್ವಹಿಸುತ್ತಿರುವ ಮಧ್ಯೆ ಯೋಧರು ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಈ ಕುರಿತು ಸಿಆರ್ಪಿಎಫ್ 38ನೇ ಬೆಟಾಲಿಯನ್ ಇನ್ಸ್ಪೆಕ್ಟರ್ ರಾಜ್ ಸಿಂಗ್ ಮಾತನಾಡಿ, ‘ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಿಭಾಯಿಸಲು ಸಾಧ್ಯವಾಗಿದೆ. ಜೊತೆಗೆ ಹೋಳಿ ಹಬ್ಬವನ್ನು ಸಹ ಆಚರಿಸಲಾಗುತ್ತದೆ’ ಎಂದು. ಭದ್ರತಾ ಕರ್ತವ್ಯಗಳ ನಡುವೆ ಯೋಧರು ಹಬ್ಬದ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ ವಿಡಿಯೋ ಗಮನ ಸೆಳೆದಿದೆ.
ವಿಡಿಯೋ ಕೃಪೆ: ಎಎನ್ಐ
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ