ದಾವಣಗೆರೆ, ಮಾ.4: ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು ಕೇವಲ ಒಂದು ತಿಂಗಳಿನಲ್ಲಿ, ಈಗ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೂ ಬಾಂಬ್ ಬೆದರಿಕೆ ಬಂದಿರುವುದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ದಾವಣಗೆರೆ ನಗರದ ರಿಂಗ್ ರೋಡ್ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟ ಬೆದರಿಕೆ ಹಾಕಿದ್ದಾರೆ. ಸುದ್ದಿ ತಿಳಿಯದಂತೆ ಸ್ಥಳಕ್ಕೆ ಧಾವಿಸಿದ ಶ್ವಾನ (ಡಾಗ್ ಸ್ಕ್ವಾಡ್) ಮತ್ತು ಬಾಂಬ್ ನಿಷ್ಕ್ರಿಯ (ಬಾಂಬ್ ಡಿಸ್ಪೋಸಲ್ ಸ್ಕ್ವಾಡ್), ನಿವಾಸದ ಮೂಲೆ ಮೂಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಸುಮಾರು ಒಂದು ತಿಂಗಳ ಹಿಂದೆ ಇದೇ ರೀತಿ ಜಿಲ್ಲಾಧಿಕಾರಿಗಳ ಕಚೇರಿಗೂ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದೀಗ ನೇರವಾಗಿ ಅವರ ಮನೆಗೆ ಬೆದರಿಕೆ ಬಂದಿರುವುದು ಗಂಭೀರ ವಿಷಯವಾಗಿದೆ. ದಾವಣಗೆರೆ ನಗರ1 ತಾಂತ್ರಿಕ ತಂಡದ ನೆರವಿನೊಂದಿಗೆ12 ಕ್ಕೆ ಕರೆ ಮಾಡಿದ ವ್ಯಕ್ತಿಯ ಲೋಕೇಶನ್ ಪತ್ತೆ ಹಚ್ಚಲು ಮುಂದಾಗಿದೆ. ಜಿಲ್ಲಾಧಿಕಾರಿಗಳ ನಿವಾಸದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದೊಂದು ಹುಸಿ ಬಾಂಬ್ ಕರೆಯೇ ಅಥವಾ ಗಂಭೀರ ಸಂಚೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ