ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು

ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು


ಕೋಲಾರ, ಮಾ.4: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶ ಮೂಲದ ಬಶೀರ್ (40) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಸಣ್ಣಪುಟ್ಟ ಗಾಯ. ಕಾರು ಬೈಕ್‌ಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದ ಡಿವೈಡರ್‌ಗೆ ಅಪ್ಪಳಿಸಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿದೆ ಎಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: “ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ”: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ

ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ, ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 9:40 pm, ಬುಧವಾರ, 4 ಮಾರ್ಚ್ 26



Source link

Leave a Reply

Your email address will not be published. Required fields are marked *