Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 5ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 5ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 5ರ ದಿನಭವಿಷ್ಯ

ಈ ದಿನ ಕನಿಷ್ಠ 15 ನಿಮಿಷಗಳ ಕಾಲ ಸಂಪೂರ್ಣ ಮೌನವಾಗಿರಿ. ಹೀಗೆ ಮಾಡುವುದರಿಂದ ಅಭಿಪ್ರಾಯ ಭೇದ- ಮನಸ್ತಾಪಗಳು ಆಗುವ ಸಂಭವವನ್ನು ದೂರ ಮಾಡುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಭರತನಾಟ್ಯ ಕಲಾವಿದರಿಗೆ ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನ ನೀಡಲು ಅವಕಾಶ ದೊರೆಯಲಿದೆ. ಇಷ್ಟು ಕಾಲ ಯಾವುದು ನಿಮಗೆ ಹವ್ಯಾಸ ಆಗಿತ್ತೋ ಅದನ್ನೇ ಆದಾಯ ಮೂಲ ಆಗುವಂಥ ವೃತ್ತಿಯಾಗಿ ಮಾಡಿಕೊಳ್ಳುವ ಬಗ್ಗೆ ಆಲೋಚನೆ ಬರಲಿದೆ. ಪಶು ಸಾಕಣೆ ಮಾಡುತ್ತಾ ಇರುವವರಿಗೆ ವ್ಯವಹಾರ ವಿಸ್ತೃತ ಅವಕಾಶಗಳು ತೆರೆದುಕೊಳ್ಳಲಿವೆ. ನಿಮ್ಮ ಬಗ್ಗೆ ಹರಿದಾಡುವಂಥ ಗಾಸಿಪ್ ಗಳ ಕುರಿತು ತಲೆ ಕೆಡಿಸಿಕೊಳ್ಳಬೇಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಪರಿಚಿತರ ಅಗತ್ಯಗಳಿಗೆ ನೆರವು ನೀಡಲಿದ್ದೇವೆ. ಸೈಟು- ಮನೆ ಖರೀದಿ ಮಾಡಬೇಕು ಎಂದಿರುವವರು ತಮ್ಮ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೌಕಾಶಿ ಮಾಡಿ, ಈ ದಿನ ಕೆಲವು ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಖರೀದಿಸಿದೆ. ಬರೀ ಮಾತಿನಿಂದ ಆಗುವುದಿಲ್ಲ ಎಂಬಂಥ ಕಡೆ ಕೆಲಸ- ಕಾರ್ಯಗಳನ್ನು ಪೂರ್ಣ ಮಾಡುವುದಕ್ಕೆ ಪ್ರಭಾವದ ಬಳಕೆ ಮಾಡಲಾಗಿರುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆ ಹೆಚ್ಚಾಗಲಿದೆ. ನಿಮ್ಮಲ್ಲಿ ಮಕ್ಕಳನ್ನು ಹಾಸ್ಟೆಲ್ ನಲ್ಲಿ ಬಿಟ್ಟು ಓದುವ ಬಗ್ಗೆ ಆಲೋಚನೆ ಮಾಡಲಿದ್ದೇನೆ. ನಿಮ್ಮ ಹಳೇ ಚಿನ್ನದ ಆಭರಣಗಳ ವಿನಿಮಯಕ್ಕೆ ನಿರ್ಧಾರ ಕೈಗೊಳ್ಳುವ ಯೋಗ. ಸ್ವಲ್ಪ ಪ್ರಮಾಣದಲ್ಲಿಯಾದರೂ ಸಾಲ ಮಾಡುವ ಸಾಧ್ಯತೆ ಇದೆ. ಅಥವಾ ಕೆಲವರು ಪಿಎಫ್, ಎಫ್.ಡಿ., ಇಂಥವುಗಳಿಂದ ಹಣ ಪಡೆಯಲು ಪ್ರಯತ್ನ ಮಾಡಲಾಗಿದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *