
ಮನೆಯನ್ನು ಒರೆಸುವ ನೀರಿಗೆ ಸ್ವಲ್ಪ ಕಲ್ಲು ಉಪ್ಪನ್ನು ಸೇರಿಸಿ. ಇದು ಮನೆಯಲ್ಲಿ ನಕಾರಾತ್ಮಕ ಶಕ್ತಿ (ನಕಾರಾತ್ಮಕ ಶಕ್ತಿ) ದೂರ ಮಾಡುತ್ತದೆ. ವಿನಾಕಾರಣ ಜಗಳ- ಕಲಹ ಆಗುತ್ತಿದ್ದರೆ ಸಮಸ್ಯೆ ನಿವಾರಣೆಯಾಗುತ್ತದೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):
ನಿಮ್ಮ ಸಮಯ ನಿರ್ಧಾರಗಳಿಗೆ ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಚಾಲನೆ ಇರುತ್ತದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):
ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ ಎಂದಾದಲ್ಲಿ ಆ ಮಾಹಿತಿ ದೊರೆಯಲಿದೆ. ನೀರು ಮಾರಾಟದ ಮೂಲಕ ಆದಾಯವನ್ನು ಪಡೆಯುತ್ತಾ ಇರುವವರಿಗೆ ದೀರ್ಘಾವಧಿಗೆ- ದೊಡ್ಡ ಪ್ರಮಾಣದ ಆರ್ಡರ್ ದೊರೆಯುವ ಸಾಧ್ಯತೆಯಿದೆ. ಕನಿಷ್ಠ ಪ್ರಮಾಣದ ಹೂಡಿಕೆಯೊಂದಿಗೆ ಆರಂಭಿಸಿದ ವ್ಯವಹಾರವೊಂದು ಹೆಚ್ಚಿನ ಪ್ರಮಾಣದ ಲಾಭ ತಂದುಕೊಡಲಿದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):
ನಿಂತ ನಿಲವಿನಲ್ಲೇ ನಿಮ್ಮ ಅಭಿಪ್ರಾಯ ತಿಳಿಸಿಬಿಡಬೇಕು ಎಂದು ಪಟ್ಟು ಹಿಡಿಯುವಂಥವರ ಜತೆಗಿನ ವ್ಯವಹಾರ ಮುಂದುವರಿಸಲು ಹೋಗಬೇಡಿ. ಬ್ಯಾಂಕ್ ಗೆ ಕಟ್ಟಲೇಬೇಕಾದ ಹಣವನ್ನು ಹೊಂದಿಸಲು ಹೆಚ್ಚು ಶ್ರಮ ಹಾಕಲಾಗಿದೆ. ಇನ್ನು ನಿಮ್ಮಲ್ಲಿ ಉಳಿತಾಯ ಅಥವಾ ಹೂಡಿಕೆ ಹಣವನ್ನು ಹಿಂತೆಗೆದುಕೊಂಡು, ಸಾಲವನ್ನು ಚುಕ್ತಾ ಮಾಡುವುದಕ್ಕೆ ತೀರ್ಮಾನಿಸುತ್ತೀರಿ.
ಲೇಖನ- ಸ್ವಾತಿ ಎನ್.ಕೆ.