ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಪರಸ್ಪರ ಪ್ರೀತಿಸಿ ಮದುವೆ ಆದವರು. ಇಬ್ಬರದ್ದೂ ಒಂದೇ ವೃತ್ತಿ. ಸಿನಿಮಾ ಸೆಟ್ ಅಲ್ಲೇ ಇವರಿಗೆ ಪ್ರೀತಿ ಮೂಡಿತು ಎಂದು ಹೇಳಲಾಗಿದೆ. ಈಗ ಇವರ ವಿವಾಹ ನಡೆದಿದೆ.
ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ. ಮಾರ್ಚ್ 4 ರಂದು ಹೈದರಾಬಾದ್ನಲ್ಲಿ ಅದ್ದೂರಿ ಆರತಕ್ಷತೆಯನ್ನು ನಡೆಸಲಾಯಿತು.
ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ. ಮಾರ್ಚ್ 4 ರಂದು ಹೈದರಾಬಾದ್ನಲ್ಲಿ ಅದ್ದೂರಿ ಆರತಕ್ಷತೆಯನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ರಾಮ್ ಚರಣ್, ಚಿರಂಜೀವಿ, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಭಾಗಿ ಆದರು.
ಇನ್ನು, ಕುಟುಂಬದ ಫೋಟೋ ಗಮನ ಸೆಳೆದಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಇಡೀ ಕುಟುಂಬ ಒಂದೇ ಕಡೆ ಸೇರಿತ್ತು. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇತ್ತು.
ರಶ್ಮಿಕಾ ಮಂದಣ್ಣ ತಾಯಿ ರೀತಿಯಲ್ಲೇ ಇದ್ದಾರೆ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು, ರಶ್ಮಿಕಾ ಅವರ ಸಹೋದರಿ ಶಿಮಾನ್ ಮಂದಣ್ಣ ಕೂಡ ಗಮನ ಸೆಳೆದರು.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮದುವೆಗಿಂತ ಆರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಸೆಲೆಬ್ರಿಟಿಗಳ ದಂಡೇ ಹಾಜರಿ ಹಾಕಿತ್ತು.






