ಹಾಸನ, ಮಾರ್ಚ್ 5: ಮಹಾನಗರಪಾಲಿಕೆಯಲ್ಲಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದರು. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಮತ್ತು ಇನ್ಸ್ ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿದೆ. ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಬಂದರು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯಲು ಸತಾಯಿಸಲಾಗಿದೆ.
ಅಧಿಕಾರಿಗಳು ಮನೆ ಬೆಲ್ ಮಾಡಿ, ಬಾಗಿಲು ಬಡಿದು, ಪರಿಶೀಲನೆಗಾಗಿ ಬಾಗಿಲು ತೆರೆಯುವಂತೆ ಸೂಚನೆ ನೀಡಿದರೂ, ಮನೆಯೊಳಗಿಂದ ಯಾರೂ ಕಾಣಿಸಿಕೊಂಡಿಲ್ಲ. ಅಧಿಕಾರಿಗಳು ಆಗಮಿಸಿದಾಗ ಮನೆಯಲ್ಲಿ ಲೈಟ್ ಆನ್ ಆಗಿದ್ದು, ನಂತರ ಆಫ್ ಆಗಿದೆ. ಎಸಿ ಕೂಡ ಆನ್ ಆಗಿ ನಂತರ ಆಫ್ ಆಗಿರುವ ಮಾಹಿತಿ ಲಭ್ಯವಾಗಿದೆ. ಸತ್ಯನಾರಾಯಣ ಅವರು ಈ ಹಿಂದೆ ಹಾಸನದ ಹೂಡಾದಲ್ಲಿ, ನಂತರ ಮಹಾನಗರಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ