ಅನರ್ಹ BPL ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಭರ್ಜರಿ ಶಾಕ್​​: 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ

ಅನರ್ಹ BPL ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಭರ್ಜರಿ ಶಾಕ್​​: 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ


ಬೆಂಗಳೂರು, ಮಾರ್ಚ್ 05: ಅನರ್ಹವಾಗಿ ಬಿಬಿಎಲ್ ಕಾರ್ಡ್ಹೊಂದಿರುವವರ ವಿರುದ್ಧ ಸಮರ ಮುಂದುವರಿಸಿರುವ ರಾಜ್ಯ ಸರ್ಕಾರ ಕಳೆದ 5ನೇ ತಿಂಗಳು 15.12 ಲಕ್ಷ ಮಂದಿಗೆ ಭಾರಿ ಮೊತ್ತ ನೀಡಿದೆ. ಅನರ್ಹರನ್ನು ಹೆಕ್ಕಿ ಹೆಕ್ಕಿ ಗುರುತಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಈ ಸುಮಾರು ಐದೂವರೆ ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿದೆ. 4 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್ ಆಗಿ ಬದಲಾಯಿಸಲಾಗಿದೆ. 23 ಸಾವಿರಕ್ಕೂ ಹೆಚ್ಚು ಪಡಿತರ ಚೀಟಿಗಳು ತಾತ್ಕಾಲಿಕವಾಗಿ ರದ್ದುಗೊಂಡಿರೋದು ಫಲಾನುಭವಿಗಳ ನಿದ್ದೆಗೆಡಿಸಿದೆ.

ಕಳೆದ 5 ತಿಂಗಳ ಕಾರ್ಯಾಚರಣೆ ಹೇಗಿದೆ?

  • ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತನೆಗೊಂಡ ಕಾರ್ಡ್‌ಗಳು – 4.09 ಲಕ್ಷ (14,68,540 ಭಾದಿತರು)
  • ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳು – 5,632 (9,826 ಭಾದಿತರು)
  • ತಾತ್ಕಾಲಿಕವಾಗಿ ಅಮಾನತ್ತಾದ BPL ಕಾರ್ಡ್‌ಗಳು- 23,068 (34,617 ಭಾದಿತರು)

ಇದನ್ನೂ ಓದಿ: ಬಿಪಿಎಲ್ ಕಾರ್ಡ್ದಾರರಿಗೆ ಶೀಘ್ರವೇ ಗುಡ್ನ್ಯೂಸ್?; ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ

ಮತ್ತೊಂದೆಡೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ. ಬದಲಾಗಿ ಅನರ್ಹರ ಪಾ ಎಂದು ಜನ ಸಾಮಾನ್ಯರಿಂದಲೂ ಆಕ್ರೋಶ ಕೇಳಿಬಂದಿದೆ. ಕಾರು, ಬಂಗಲೆ, ಜಮೀನು ಇರುವ ಮಂದಿಯೇ ಬಿಪಿಎಲ್ ಕಾರ್ಡ್. ಹೀಗಾಗಿ ಅನರ್ಹರನ್ನು ಗುರುತಿಸಿ ಅವರ ಕಾರ್ಡ್ ರದ್ದು ಮಾಡುವ ಕಾರ್ಯವನ್ನು ತೀವ್ರಗೊಳಿಸಬೇಕು. ಕಡು ಬಡವರು, ದುಡಿದು ತಿನ್ನುವ ಮಂದಿಗೆ ಬಿಪಿಎಲ್ ಕಾರ್ಡ್ ಸಿಗಬೇಕು. ಕಾರ್ಯಾಚರಣೆಯ ಹೆಸರಿನಲ್ಲಿ ಬಡವರ ಕಾರ್ಡ್ ಕಿತ್ತುಕೊಳ್ಳದೆ, ಶ್ರೀಮಂತರಿಗೆ ಬಿಸಿ ಮುಟ್ಟಿಸಬೇಕು ಎಂದು ಆಹಾರ ಇಲಾಖೆಯನ್ನು ಸಾರ್ವಜನಿಕರು ವೀಕ್ಷಿಸಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಈ ಹಿಂದೆ ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದ ಕಾರಣ ಬಿಪಿಎಲ್ ಕಾರ್ಡ್ ಹೊಂದಿರುವ ಅನೇಕ ಜನರು ನಿಟ್ಟುಸಿರು ಬಿಟ್ಟಿದ್ದರು. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ ದಾರರ ಆದಾಯವನ್ನು 1.20 ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಅಧಿಕವಾಗಿದೆ. ಹೀಗಾಗಿ ಈ ಬಗ್ಗೆ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದು ಹೇಳಿರುವ ಹಿನ್ನೆಲೆ ಮಿತಿಗಿಂತ ಅಧಿಕ ಆದಾಯ ಹೊಂದಿದ್ದು, ಬಿಪಿಎಲ್ ಕಾರ್ಡ್ ಇರುವವರಲ್ಲಿ ಹೊಸ ಆಶಾಭಾವನೆ ಮೂಡಿತ್ತು. ಆದರೆ ಸರ್ಕಾರದ ಈಗಿನ ನಿರ್ಧಾರ ಅಕ್ರಮವಾಗಿ ಬಿಬಿಎಲ್ ಕಾರ್ಡ್ ಹೊಂದಿರುವವರಿಗೆ ಉಳಿಗಾಲವಿಲ್ಲ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *