2026 ಐಸಿಸಿ ಟಿ20 ರತ್‌ನ ಎರಡನೇ ಸೆಮಿನಲ್‌ನಲ್ಲಿ ಆಥೇಯ ಮತ್ತು ಹಾಲಿ ಚಾಂಪಿಯನ್, ಭಾರತ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಆಟದ ಗೆದ್ದ ತಂಡಕ್ಕೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡ ಎದುರಾಳಿಯಾಗಲಿದೆ. ಟಿ20 ಭಾರತ ಸೆಮಿಫೈನಲ್‌ನಲ್ಲಿ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಇದಕ್ಕೂ ಮೊದಲು ನಡೆದಿದ್ದ ಎರಡು ಮುಖಾಮುಖಿಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಇಂದಿನ ಗೆದ್ದ ತಂಡ 2-1 ಅಂತರದ ಮುನ್ನಡೆ ಸಾಧಿಸಿ ಫೈನಲ್ ತಲುಪಲಿದೆ.
ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಈ ಸೆಮಿಫೈನಲ್ ಆಟದ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ತಂಡದಲ್ಲಿ ಒಂದು ಬದಲಾವಣೆಯನ್ನು ಸಹ ಮಾಡಲಾಗಿದೆ. ಇತ್ತ ಟಾಸ್ ಸೋತು ಮಾತನಾಡಿದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಟಾಸ್ ಗೆದ್ದಿದ್ದರೆ, ನಾವು ಕೂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡುತ್ತಿದ್ದೇವೆ. ಅಂದರೆ ಟಾಸ್ ಸೋತರೂ ಭಾರತ ತಂಡಕ್ಕೆ ಬೇಕಾಗಿತ್ತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿ ಟೀಂ ಇಂಡಿಯಾ ಎಷ್ಟು ರನ್ ಕಲೆಹಾಕುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಅಂದಹಾಗೆ ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ.
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಉಭಯ ತಂಡಗಳ ಮುಖಾಮುಖಿ ದಾಖಲೆ ನೋಡುವುದಾದರೆ.. ಭಾರತ ಇಂಗ್ಲೆಂಡ್ ವಿರುದ್ಧ ಮೇಲುಗೈ ಸಾಧಿಸಿರುವುದು ಸ್ಪಷ್ಟವಾಗಿದೆ. ಇದುವರೆಗೆ ಎರಡು ತಂಡಗಳ ನಡುವೆ ನಡೆದಿರುವ 17 ಪಂದ್ಯಗಳಲ್ಲಿ ಭಾರತ ಗೆದ್ದಿದ್ದರೆ, ಇಂಗ್ಲೆಂಡ್ 12 ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಏಳು ಮುಖಾಮುಖಿಯಲ್ಲಿ ಭಾರತ, ಇಂಗ್ಲೆಂಡ್ ತಂಡವನ್ನು ತವರಿನಲ್ಲಿ ಆರು ಬಾರಿ ಸೋಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತವೇ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.
ಉಭಯ ತಂಡಗಳು
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಶ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹ್ಯಾರಿ ಬ್ರೂಕ್ (ನಾಯಕ), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಮೀ ಬ್ರಾಟನ್, ಲಿಯಾಮ್ ಡಾಸನ್, ಜೋಫ್ರಾಚರ್ ಆರ್ಚರ್, ಆದಿಲ್ ರಶೀದ್.