ಬೆಂಗಳೂರು, (ಮಾರ್ಚ್ 05) : 2026-27ನೇ ಸಾಲಿನ ರಾಜ್ಯ ಬಜೆಟ್ (ಕರ್ನಾಟಕ ಬಜೆಟ್ 2026) ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು (ಸಿದ್ದರಾಮಯ್ಯ) 6ರಂದು ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದೆ, ಈ ಬಾರಿಯ ಆಯವ್ಯಯದ ಮೇಲೆ ರಾಜ್ಯದ ಜನತೆ ಮಾರ್ಚ್ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗದೆ, ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಪ್ರಮುಖ ವಲಯಗಳಿಗೆ ಬಂಪರ್ ಕೊಡುಗೆಗಳು ಸಿಗುವ ವಿಶ್ವಾಸವಿದೆ.
ಹಣಕಾಸು ಇಲಾಖೆ ಸಿದ್ದಪಡಿಸಿದ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ಹಾಗೂ ಧೀರ್ಘಕಾಲದ ಯೋಜನೆಗಳಿಗೆ ಹೆಚ್ಚಿನ ಅನುದಾನ ಮೀಸಲಿಡುತ್ತಾರಾ ಎಂಬ ಕುತೂಹಲ ಮನೆ ಮಾಡಿದೆ. ರಾಜ್ಯದ ಒಟ್ಟಾರೆ ಬಜೆಟ್ ಗಾತ್ರ 4.50 ಲಕ್ಷ ಕೋಟಿ ರೂಪಾಯಿ ಆಸುಪಾಸಿಗೆ ತಲುಪಲಿದೆ. ಇನ್ನೂ ಸಾಲದ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಕರ್ನಾಟಕ ಬಜೆಟ್ 2026: ದಾಖಲೆಯ 17ನೇ ಬಜೆಟ್ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಜೆಟ್ ಎಷ್ಟು ಗಂಟೆಗೆ? ಲೈವ್ ಪ್ರಸಾರ ಎಲ್ಲಿ ನೋಡಬಹುದು?
ಗ್ಯಾರಂಟಿ ನಿಭಾಯಿಸಬೇಕು, ಅನುದಾನ ಕೊಡಬೇಕು, ಅಭಿವೃದ್ಧಿಯನ್ನೂ ಮಾಡಬೇಕು, ಸೊರಗಿರುವ ಇಲಾಖೆಗಳಿಗೆ ಬೂಸ್ಟ್ ನೀಡಬೇಕು, ರೈತರ ಸಮಸ್ಯೆಗೆ ಘೋಷಣೆ ಮಾಡಬೇಕು, ಮಹಿಳೆಯರಿಗೆ ಬಂಪರ್ ಕೊಡುಗೆ ನೀಡಬೇಕು, ಶಿಕ್ಷಣಕ್ಕೆ ಒತ್ತು ನೀಡಬೇಕು, ಆರೋಗ್ಯಕ್ಕೂ ಟ್ರೀಟ್ಮೆಂಟ್ ಕೊಡಬೇಕು. ಹೀಗೆ ಸಾಲು ಸಾಲು ಸವಾಲುಗಳನ್ನ ಹೆಗಲ ಮೇಲೆ ಹೊತ್ತಿರೋ ಸಿಎಂ ಸಿದ್ದರಾಮಯ್ಯನವರು ತಮ್ಮ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ದಾಖಲೆ 17ನೇ ಬಜೆಟ್ ಅನ್ನು ಸಿದ್ದರಾಮಯ್ಯನವರು ಮಾರ್ಚ್ 06 ರಂದು ಬೆಳಗ್ಗೆ 10.15ಕ್ಕೆ ಬಜೆಟ್ ಓದಲಿದ್ದಾರೆ.
ಬಜೆಟ್ 2026 ರ ನೇರ ಪ್ರಸಾರವನ್ನು ನೀವು ಟಿವಿಯಲ್ಲಿ ನಿಮ್ಮ ನೆಚ್ಚಿನ TV9 ಕನ್ನಡದಲ್ಲಿ ವೀಕ್ಷಿಸಬಹುದು. ಇನ್ನು ನೀವು ಇದ್ದಲ್ಲೇ ಮೊಬೈಲ್ ನಲ್ಲಿ ನೋಡುವುದಾದರೆ ಟಿವಿ9 ಯುಟ್ಯೂಬ್ನಲ್ಲೂ ಸಹ ನೋಡಬಹುದು. ಹಾಗೆಯೇ ಬಜೆಟ್ ನಲ್ಲಿ ಏನೇನು ಘೋಷಣೆಯಾಗುತ್ತೆ ಎನ್ನುವುದನ್ನು ತಿಳಿಯಲು ಟಿವಿ9 ಕನ್ನಡ ವೆಬ್ ಸೈಟ್ಲೈವ್ ಪೇಜ್ ನೋಡಿ. ಹೀಗೆ ದೃಶ್ಯ ಜೊತೆ ಟೆಕ್ಸ್ಟ್ ಫಾರ್ಮೆಂಟ್ನಲ್ಲೂ ಟಿವಿ9 ನಿಮಗೆ ಕ್ಷಣ ಕ್ಷಣದ ಮಾಹಿತಿ ನೀಡುತ್ತೆ, ಹೀಗಾಗಿ ನಿಖರ ಮಾಹಿತಿಗಾಗಿ TV9 ಕನ್ನಡ ಫೋಲೋ ಮಾಡಿ.