Karnataka Budget 2026 LIVE: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ

Karnataka Budget 2026 LIVE: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ


ಕರ್ನಾಟಕ ಬಜೆಟ್ 2026-27 ಕನ್ನಡದಲ್ಲಿ ಲೈವ್ ನ್ಯೂಸ್ ನವೀಕರಣಗಳು: ಬೆಂಗಳೂರು, ಮಾರ್ಚ್ 06: ಇಂದು ಎಲ್ಲರ ಚಿತ್ತ ಕರ್ನಾಟಕ ಬಜೆಟ್ (ಕರ್ನಾಟಕ ಬಜೆಟ್) ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(ಸಿದ್ದರಾಮಯ್ಯ) ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ರೂ.ತಲುಪುವ ನಿರೀಕ್ಷೆ ಇದೆ. 2025 ರಲ್ಲಿ ಆದಾಯ ಸಂಗ್ರಹದ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದ ಕಾರಣ 2026-27 ನೇ ಸಾಲಿನ ಬಜೆಟ್ ಮೇಲೆ ಅದರ ಪರಿಣಾಮವು ಗೋಚರಿಸುವ ಸಾಧ್ಯತೆಗಳಿವೆ.

1995-96ರಲ್ಲಿ ಮೊದಲ ಮುಂಗಡಪತ್ರ ಮಂಡಿಸಿದ್ದ ಸಿದ್ದರಾಮಯ್ಯ ಕಳೆದ 30 ವರ್ಷಗಳಲ್ಲಿ 17ನೇ ವರ್ಷದ ಬಜೆಟ್ ಮಂಡಿಸಲಿದ್ದಾರೆ. 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನೂ ಹೊಂದಿದ್ದರು. ಆ ಅವಧಿಯ ಎಲ್ಲಾ ಬಜೆಟ್‌ಗಳನ್ನು ಅವರೇ ಮಂಡಿಸಿದ್ದರು. ಎರಡನೇ ಅವಧಿ ಮುಖ್ಯಮಂತ್ರಿಯಾದ ಬಳಿಕ ಈವರೆಗೂ ಮೂರು ಬಾರಿ ಬಜೆಟ್ ಮಂಡಿಸಿದ್ದು, 4ನೇ ಬಜೆಟ್ ಮಂಡನೆಗೆ ಈಗ ಸಿದ್ಧವಾಗಿದ್ದಾರೆ.

2026ರ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಮೀಸಲಿಡಬಹುದು, ಪಂಜಾಬ್ ಮಾದರಿಯಲ್ಲಿ ರೈತರಿಗೆ ಉಚಿತ ಶುಲ್ಕ ವ್ಯವಸ್ಥೆ, ನಗರಗಳಿಗೆ ಮೆಗಾಸಿಟಿ ಯೋಜನೆ ಅಭಿವೃದ್ಧಿ ಘೋಷಣೆ, ಟನಲ್ ರೋಡ್ ಮತ್ತು ಡಬಲ್ ಡೆಕ್ಕರ್ ರಸ್ತೆ ಯೋಜನೆ ವಿಸ್ತರಣೆ, ರೈತರ ಎಲ್ಲಾ ಬೆಳೆಗಳಿಗೆ ವಿಶೇಷ ವಿಮಾ ಯೋಜನೆ ಘೋಷಣೆ ಮಾಡುವ ಸಾಧ್ಯತೆಯಿದೆ.

ಮತ್ತಷ್ಟು ಓದಿ: ಕರ್ನಾಟಕ ಬಜೆಟ್ 2026: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ?

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಶಸ್ಸು ಸಿಕ್ಕಿದೆ ಎನ್ನುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ ಎನ್ನುವ ವಿಚಾರಗಳೂ ಜನರ ಬಾಯಲ್ಲಿ ಕೇಳಿಬರುತ್ತಿದೆ. ಸಿದ್ದರಾಮಯ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವ ಸಾಧ್ಯತೆ ಇದೆ. ಪ್ರಸ್ತುತ ಬಜೆಟ್‌ನಲ್ಲಿ ಸಿದ್ದರಾಮಯ್ಯ ಅಬಕಾರಿ ಸೆಸ್, ಇಂಧನ ಸೆಸ್ ಹೆಚ್ಚಿಸುವ ಸಾಧ್ಯತೆಗಳಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ರಲ್ಲಿ ಒಟ್ಟು 3.71 ಲಕ್ಷ ಕೋಟಿ ರೂ. ಗಾತ್ರದ ಹಾಗೂ 2025-2026ರಲ್ಲಿ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದರು. ಬಾರಿ ಯಾವೆಲ್ಲಾ ಘೋಷಣೆಗಳನ್ನು ಮಾಡಲಿದ್ದಾರೆ, ಯಾವುದೆಲ್ಲಾ ದುಬಾರಿಯಾಗಲಿದೆ, ಯಾವ ಜಿಲ್ಲೆಗಳಿಗೆ ಎಷ್ಟು ಹಣ ಸಿಗಲಿದೆ ಈ ಬಜೆಟ್ ಕ್ಷಣದ ಮಾಹಿತಿಗಾಗಿ ಟಿವಿ9 ಕನ್ನಡ ವೆಬ್‌ಸೈಟ್‌ನಲ್ಲಿ ವೀಕ್ಷಿಸಿ.

ಕರ್ನಾಟಕದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *