10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! ನಿಜವಿರಬಹುದೇ?

10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! ನಿಜವಿರಬಹುದೇ?


ಜೆಪಿ ಶಾಸಕ ಸುರೇಶ್ ಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯಚಿತ್ರದ ಕ್ರೆಡಿಟ್ ಮೂಲ: tv9

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (ಸಿದ್ದರಾಮಯ್ಯ) 2026-27ನೇ ಸಾಲಿನ ಕರ್ನಾಟಕ ಬಜೆಟ್ (ಕರ್ನಾಟಕ ಬಜೆಟ್) ಮಾರ್ಚ್ 6 ರಂದು ಬೆಳಿಗ್ಗೆ 10.15 ಗಂಟೆಗೇ ವಿಧಾನಸಭೆಯಲ್ಲಿ ಮಂಡಿಸುತ್ತಿರುವುದೇಕೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಕುತೂಹಲ ಹುಟ್ಟಿಸಿದೆ. ಈ ವಿಚಾರವಾಗಿ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅಚ್ಚರಿಯ ಕಾರಣ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಸಾಮಾನ್ಯವಾಗಿ ಬಜೆಟ್ ಗಂಟೆ 10 ಅಥವಾ 11 ಗಂಟೆಗೆ ಮಾಡುವುದು ಸಾಮಾನ್ಯ. ಆದರೆ ಈ ಬಾರಿ 10.15ಕ್ಕೆ ಬಜೆಟ್ ಮಂಡನೆ ನಿಗದಿಯಾಗಿದೆ. ಇದಕ್ಕೆ ಕಾರಣವೇನು ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ಸುರೇಶ್ ಕುಮಾರ್ ಫೇಸ್ ಬುಕ್ ಪೋಸ್ಟ್ ನಲ್ಲೇನಿದೆ?

ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ವಿಧಾನಸಭೆಯಲ್ಲಿ ಈ ವರ್ಷದ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. 10.00 ಗಂಟೆ ಅಲ್ಲ, 10.30 ಗಂಟೆ ಅಲ್ಲ, 11.00 ಗಂಟೆ ಅಲ್ಲ. ಏಕೆ 10.15 ಗಂಟೆಗೆ ಎಂದು ಕುತೂಹಲದಿಂದ ವಿಚಾರಿಸಿದಾಗ ಗೊತ್ತಾಗಿದ್ದು ಈ ವಿಚಾರ. ಏಕೆಂದರೆ ಶುಕ್ರವಾರ, ಬೆಳಗ್ಗೆ 10. 30 ಗಂಟೆಯಿಂದ ರಾಹುಕಾಲ! ಬೆಳಗ್ಗೆ 7.30 ಗಂಟೆಯಿಂದ 9 ಗಂಟೆಯವರೆಗೂ ಗುಳಿಕಾಲ. #ಮೂಢನಂಬಿಕೆ ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಸುರೇಶ್ ಕುಮಾರ್ ಪೋಸ್ಟ್ ಮಾಡಿದ್ದಾರೆ.

ಸುರೇಶ್ ಕುಮಾರ್ ಫೇಸ್ ಬುಕ್ ಪೋಸ್ಟ್

ರಾಹುಕಾಲ ಆರಂಭಕ್ಕೂ ಮೊದಲು ಬಜೆಟ್ ಮಂಡನೆ ಆರಂಭಿಸಬೇಕೆಂಬ ಕಾರಣಕ್ಕೆ 10.15 ಗಂಟೆ ಆಯ್ಕೆ ಮಾಡಬಹುದೇ ಎಂಬ ಅನುಮಾನವನ್ನು ಸುರೇಶ್ ಕುಮಾರ್ ವ್ಯಕ್ತಪಡಿಸಿದ್ದಾರೆ.

ಸುರೇಶ್ ಕುಮಾರ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ವ್ಯಂಗ್ಯವಾಗಿ ಕಾಣಿಸಿಕೊಂಡಿದ್ದಾರೆ, ಮತ್ತೊಬ್ಬರು ಇದರಲ್ಲಿ ರಾಜಕೀಯ ಟೀಕೆ ಅಡಗಿದೆ ಎಂದು ಹೇಳಿದ್ದಾರೆ.

ಆದರೆ ಸರ್ಕಾರ ಈ ಬಗ್ಗೆ ಯಾವುದೇ ದೃಢೀಕರಣ ನೀಡಿಲ್ಲ. ಸಾಮಾನ್ಯವಾಗಿ ವಿಧಾನಸಭೆಯ ಕಾರ್ಯಚಟುವಟಿಕೆಗಳು, ವಿಧಾನಮಂಡಲದ ಪ್ರಕ್ರಿಯೆಗಳು ಮತ್ತು ಆಡಳಿತಾತ್ಮಕ ಕಾರಣಗಳ ಆಧಾರದ ಮೇಲೆ ಸಮಯ ನಿಗದಿಯಾಗುವುದು.

ಒಟ್ಟಿನಲ್ಲಿ, 10.15 ಗಂಟೆಯ ಸಮಯದ ಹಿಂದೆ ನಿಜವಾಗಿಯೂ ಜ್ಯೋತಿಷ್ಯ ಕಾರಣವಿದೆಯೇ ಅಥವಾ ಇದು ಕೇವಲ ರಾಜಕೀಯ ವ್ಯಂಗ್ಯವೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 10:30 am, ಶುಕ್ರವಾರ, 6 ಮಾರ್ಚ್ 26



Source link

Leave a Reply

Your email address will not be published. Required fields are marked *