
ಬೆಂಗಳೂರು, ಮಾರ್ಚ್ 6: 2025-26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1% ನೈಜ ಬೆಳವಣಿಗೆಯನ್ನು ದಾಖಲಿಸಿದೆ, ಇದು ದೇಶದ ಜಿಡಿಪಿಗಿಂತ ಹೆಚ್ಚಾಗಿರುತ್ತದೆ. ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ರಾಜ್ಯವು 56,432 ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮೂಲಸೌಕರ್ಯ ಅಭಿವೃದ್ಧಿಗೆ 8,600 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜೊತೆಗೆ, ಸಾಲದ ಬಗ್ಗೆಯೂ ಮಾಹಿತಿ ನೀಡಲಾಗಿದೆ.
ಕೇಂದ್ರ ಸರ್ಕಾರದ ತೆರಿಗೆ ನೀತಿ ಬದಲಾವಣೆಗಳು ಮತ್ತು ಜಿಎಸ್‌ಟಿ ತರ್ಕಬದ್ಧಗೊಳಿಸುವಿಕೆಯಿಂದ ರಾಜ್ಯದ ಆದಾಯ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷ 10,000 ಕೋಟಿ ರೂಪಾಯಿ ಮತ್ತು ಮುಂದಿನ ವರ್ಷ 15,000 ಕೋಟಿ ರೂಪಾಯಿ ಕೊರತೆಯಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು ಸಾಲ 8,24,389 ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ತಿಳಿಸಿದ್ದು, ಕೇಂದ್ರದ ಅಸಹಕಾರದ ನಡುವೆಯೂ ವಿತ್ತೀಯ ಶಿಸ್ತುಬದ್ಧವಾಗಿ ಅಭಿವೃದ್ಧಿ ಮುಂದುವರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ