
2026ನೇ ಸಾಲಿನ ಕರ್ನಾಟಕ ಬಜೆಟ್ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಲಾಗಿದೆ. ಎಡಿಬಿ ನೆರವಿನೊಂದಿಗೆ 2,500 ಕೋಟಿ ರೂ. ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಪರಿವರ್ತನೆ ವೆಚ್ಚ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಅಡಿಯಲ್ಲಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್‌ಗಳನ್ನು ಮಾದರಿ ಸಂಸ್ಥೆಗಳಾಗಿ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಉತ್ತೇಜಿಸಲು ಒಂಬತ್ತು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಬೋಧಕ ಸಿಬ್ಬಂದಿ ಕೊರತೆ ನೀಗ ಸರ್ಕಾರಿ ಕಾಲೇಜುಗಳಲ್ಲಿ 2,000 ಹುದ್ದೆಗಳು ಹಾಗೂ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಮಾಡಲಾಗಿದೆ. ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ಒದಗಿಸಲಾಗಿದೆ. ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್ ಮತ್ತು 3 ಇಂಜಿನಿಯರಿಂಗ್ ಕಾಲೇಜುಗಳಲ್ಲಿ 31 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲಾಗಿದೆ. ರಾಜ್ಯದಾದ್ಯಂತ ಹೊಸ ಕಾಲೇಜುಗಳ ಸ್ಥಾಪನೆ ಮತ್ತು ತಾಂತ್ರಿಕ ಕೋರ್ಸ್‌ಗಳಾದ ಟಿಫಿಷಿಯಲ್ ಇಂಟೆಲಿಜೆನ್ಸ್, ಮಷಿನ್ ಲರ್ನಿಂಗ್ ಅನ್ನು ಪರಿಚಯಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ