
ಕೋಲಾರ, ಮಾರ್ಚ್ 06: ಅದು ಬೆಟ್ಟಗುಡ್ಡಗಳಿರುವ ಭೂಮಿ (ಭೂಮಿ). ಅಲ್ಲಿ ಕೃಷಿ ಯೋಗ್ಯವಲ್ಲ, ಅದನ್ನು ರೈತರಿಗೆ ಮಂಜೂರು ಮಾಡುವುದು ಬೇಡ ಎಂದು ಅಧಿಕಾರಿಗಳು ತಿರಸ್ಕರಿಸಿದ್ದರು. ಆದರೆ ಇಂದು ಆ ಭೂಮಿಗೆ ಬಂಗಾರದ ಬೆಲೆ ಬಂದ ಹಿನ್ನಲೆಯಲ್ಲಿ ಶಾಮೀಲಾಗಿ ನೂರಾರು ಕೋಟಿ ರೂ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ರಾತ್ರಿ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ.
ಕೋಲಾರ ಜಿಲ್ಲೆಯ ಮಾಲೂರು ಬೆಂಗಳೂರಿಗೆ ಹೊಂದಿಕೊಂಡಿರುವ ತಾಲ್ಲೂಕು. ಯಾವುದೇ ಮಾಲೂರು ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಕಳೆದ ಕೆಲವು ದಿನಗಳಿಂದ ಮಾಲೂರು ತಾಲ್ಲೂಕಿನಲ್ಲಿ ಮೇಲಿಂದ ಮೇಲೆ ಭೂ ಹಗರಣಗಳು ನಡೆಯುತ್ತಿವೆ. ಅದರಂತೆ ಮಾಲೂರು ತಾಲ್ಲೂಕು ಚೆನ್ನಿಗರಾಯಪುರ ಗ್ರಾಮದ ಸರ್ವೆ ನಂ-6ರಲ್ಲಿ ಸುಮಾರು 250 ಕೋಟಿ ರೂ ಬೆಲೆಬಾಳುವ ಸುಮಾರು 81 ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದರಲ್ಲಿ ಪ್ರಭಾವಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಶಾಮೀಲಾದ ಆರೋಪವೂ ಇದೆ.
ಕೂಲಂಕುಶವಾಗಿ ತನಿಖೆಗೆ ಸೂಚನೆ
ಪ್ರಸ್ತುತ ನೂರಾರು ಕೋಟಿಯ ಭೂ ಅಕ್ರಮ ಕುರಿತು ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಈ ವಿಚಾರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆಯ ವಿಷಯವಾಗಿ ಸ್ವತ: ಜಿಲ್ಲಾ ಉಸ್ತವಾರಿ ಸಚಿವ ಚೆನ್ನಿಗರಾಯಪುರ ಭೂ ಅವ್ಯವಹಾರದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಕೂಡಲೇ ಜಮೀನು ಮಂಜೂರಾತಿಗೆ ತಡೆಯಾಜ್ಞೆ ನೀಡಿ ಕೂಲಂಕುಶವಾಗಿ ತನಿಖೆ ನಡೆಸಿ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ!
ಅಷ್ಟಕ್ಕೂ ಏನಿದು ಚೆನ್ನಿಗರಾಯಪುರ ಗ್ರಾಮದ ನೂರಾರು ಕೋಟಿ ರೂ ಬೆಲೆಬಾಳುವ ಭೂಮಿಯ ಕಥೆ ಅಂತ ನೋಡುವುದಾದರೆ ಸುಮಾರು 44 ವರ್ಷಗಳ ಹಿಂದೆ ಅಂದರೆ 1982ರಲ್ಲಿ ಚೆನ್ನಿಗರಾಯ ಗ್ರಾಮದ ಸರ್ವೆ ನಂ-6 ರಲ್ಲಿದ್ದ ಗೊರಜು ಹಾಗೂ ಮಣ್ಣು ಗುಡ್ಡವಿದ್ದ ಭೂಮಿಗೆ ಮಂಜೂರು ಮಾಡುವಂತೆ 27 ಜನರಿಗೆ ತಲಾ ಮೂರು ವಿನಿಯೋಗದಂತೆ 81 ಭೂಮಿ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಲಾಗಿದೆ. ಅಂದಿನ ಭೂ ವಿತರಣಾ ಸಲಹಾ ಸಮಿತಿ ಸ್ಥಳ ಪರಿಶೀಲನೆ ನಡೆಸಿ ಈ ಭೂಮಿ ವ್ಯವಸಾಯ ಮಾಡಲು ಯೋಗ್ಯವಿಲ್ಲ, ಅಲ್ಲಿ ಕಲ್ಲುಗುಡ್ಡ, ಬೆಟ್ಟಗಳಿದ್ದು ಅಲ್ಲಿ ವ್ಯವಸಾಯ ಮಾಡಲು ಆಗೋದಿಲ್ಲ. ಅದನ್ನು ಅರಣ್ಯ ಬೆಳೆಸಲು ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿತ್ತು. ಅದರಂತೆ ಜಿಲ್ಲಾಧಿಕಾರಿಗಳು ತಾಲ್ಲೂಕು ಅಭಿವೃದ್ದಿ ಮಂಡಳಿಗೆ ನಿರ್ದೇಶನ ನೀಡಿದರು. ಆದರೆ ಈ ಆದೇಶವನ್ನು ಪ್ರಶ್ನಿಸಿ ಭೂ ಮಂಜೂರಾತಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಎ.ಸಿ. ಅವರಿಗೆ ಮೇಲ್ಮನವಿ ಸಲ್ಲಿಸಿದ್ದರು. ನಂತರ ಎಸಿ ಅವರು ಕೂಡ ಅವರ ಮನವಿಯನ್ನು ತಿರಸ್ಕರಿಸಿದರು.
ಎಸ್ಐ ಆದೇಶವನ್ನು ಪ್ರಶ್ನಿಸಿ 2011-12 ರಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಇದರ ವಿಚಾರಣೆ ನಡೆಸಿದ್ದ 2017ರಲ್ಲಿ ಭೂ ಮಂಜೂರಾತಿ ಸಮಿತಿಯವರು ಅರ್ಜಿದಾರರಿಗೆ ನೋಟಿಸ್ ನೀಡಿ. ನಡೆಸಿ ಮುಂದಿನ ಕ್ರಮ ಜರುಗಿಸುವಂತೆ ಆದೇಶ ನೀಡಿತ್ತು. 2017ರಿಂದ ಬಂದ ಯಾವುದೇ ಅಧಿಕಾರಿಗಳು ಈ ಪ್ರಕರಣವನ್ನು ಕೈಗೆತ್ತಿಕೊಂಡಿರಲಿಲ್ಲ. 2025 ಅಕ್ಟೋಬರ್ನಲ್ಲಿ ಅವರು ಏಕಾಏಕಿ ಮಂಜೂರಾತಿ ಆದೇಶವನ್ನು ಹೊಂದಿದ್ದಾರೆ. ಆದರೆ ಮಂಜೂರಾತಿ ಮಾಡುವ ವೇಳೆ ಮಂಜೂರಾತಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ನೋಟಿಸ್ ನೀಡಿಲ್ಲ. 44 ವರ್ಷದ ಹಿಂದಿನ ಪ್ರಕರಣದ ಹಿನ್ನೆಲೆ ಅವರ ಪ್ರಸ್ತುತ ಪರಿಸ್ಥಿತಿ ಸ್ಥಿತಿಗತಿ, ಎಲ್ಲಿ ವಾಸವಿದ್ದಾರೆ ಅನ್ನೋದರ ಕುರಿತು ವರದಿ ಪಡೆದಿಲ್ಲ. ಅವರ ಹೇಳಿಕೆಗಳನ್ನು ದಾಖಲಿಸದೆ ಏಕಾಏಕಿ ಆದೇಶವನ್ನು ಮಾಡಲಾಗಿದೆ. ಇದು ಅಕ್ರಮ ಮಂಜೂರಾತಿಗೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.
ಇನ್ನು 44 ವರ್ಷಗಳ ಹಿಂದೆ ಈ ಪ್ರದೇಶ ಬೆಟ್ಟ, ಗುಡ್ಡಗಳಿಂದ ಕೂಡಿದ್ದ ಗೊರಜು ಪ್ರದೇಶವಾಗಿತ್ತು, ಆದರೆ ಈಗ ಅಲ್ಲಿದ್ದ ಬೆಟ್ಟಗುಡ್ಡವನ್ನು ರಸ್ತೆ ಕಾಮಗಾರಿ ಹಾಗೂ ಅಕ್ರಮ ಮಣ್ಣು ಮಾಫಿಯಾ ಮಣ್ಣನ್ನೇ ಲೂಟಿ ಮಾಡಿದ್ದು, ಅಲ್ಲಿದ್ದ ಬೆಟ್ಟವೇ ನಾಪತ್ತೆಯಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಗೆ ದೂರದಲ್ಲಿದೆ, ಸದ್ಯ ಅದು ರಿಯಲ್ ಎಸ್ಟೇಟ್ ಉದ್ಯಮಿಗಳ ಕಣ್ಣುಕುಕ್ಕುವ ಸ್ಥಳವಾಗಿದೆ. ಯಾವುದೇ ಇಂದಿಗೆ ಆ ಪ್ರದೇಶದಲ್ಲಿ ಒಂದು ಪೆಟ್ಟಿಗೆಗೆ ನಾಲ್ಕರಿಂದ ಐದು ಕೋಟಿ ರೂ ಮಾರುಕಟ್ಟೆ ಬೆಲೆ ಇತ್ತು 81 ಭೂಮಿ ಮಂಜೂರಾತಿ ಹಿಂದೆ ಪ್ರಭಾವಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಕೈವಾಡವಿರುವ ಶಂಕೆ ಇದೆ, ಸದ್ಯ ಆ ಭೂಮಿಯನ್ನು ಅನುಭೋಗದಲ್ಲಿರುವವರಿಗೆ ಮಂಜೂರು ಮಾಡಲಾಗಿದೆ. ಇಲ್ಲ ಅದನ್ನು ಸರ್ಕಾರ ವಾಪಸ್ ಪಡೆಯಬೇಕು. ಅದರ ಜೊತೆಗೆ ಅಕ್ರಮದ ತನಿಖೆ ನಡೆಸಬೇಕು ಅನ್ನೋದು ಗ್ರಾಮಸ್ಥರ ಆಗ್ರಹವಾಗಿದೆ.
ಇದನ್ನೂ ಓದಿ: ಕೋಗಿಲು ಲೇಔಟ್: ಒತ್ತುವರಿ ಮಾಡಿಕೊಂಡಿರುವವರಲ್ಲಿ ಮುಸ್ಲಿಂ ಕುಟುಂಬಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ
ಒಟ್ಟಾರೆ ಕಾಲ ಬದಲಾದಂತೆ ಅಲ್ಲಿನ ಪರಿಸ್ಥಿತಿಯೂ ಬದಲಾಗುವಂತೆ 44 ವರ್ಷಗಳ ಹಿಂದೆ ಯಾವುದಕ್ಕೂ ಯೋಗ್ಯವಲ್ಲದ ಭೂಮಿಗೆ ಇಂದು ಬಂಗಾರದ ಬೆಲೆ ಬಂದಿದೆ. ತಿರಸ್ಕಾರವಾದ ಭೂಮಿಯನ್ನು ಪಡೆಯಲು ಇಂದು ನೂರಾರು ಕೋಟಿ ರೂ ಅಕ್ರಮ ಮಾಡಲು ಮುಂದಾಗಿರುವುದು ನಿಜಕ್ಕೂ ಆಶ್ಚರ್ಯವಾಗಿದೆ, ಈ ಬಗ್ಗೆ ತನಿಖೆ ನಡೆಸಿ ಅಕ್ರಮ ಬಯಲಿಗೆಳೆಯಬೇಕಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.