Headlines

ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್


ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ವಿಜಯಪುರ, ಮಾರ್ಚ್ 06: ಐದು ವರ್ಷದ ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಗೆ (ತಂದೆ) ವಿಜಯಪುರದ ವಿಶೇಷ ನ್ಯಾಯಾಲಯ 20 ವರ್ಷಗಳ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತಂದೆಯೇ ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ನಡೆದಿದ್ದೇನು?

ಹೆಂಡತಿಯ ಮೇಲಿನ ವೈಮನಸ್ಸಿನಿಂದಾಗಿ ತನ್ನ ಐದು ವರ್ಷದ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ವಿಜಯಪುರದ ವಿಶೇಷ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ಮೂಲತಃ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ನಿವಾಸಿ ಆರೋಪಿ ಸೋಮನಿಂಗ ಕಳಸದವರ ಶಿಕ್ಷೆಗೆ ಗುರಿಯಾಗಿದ್ದಾನೆ.

ಇದನ್ನೂ ಓದಿ: ವಿಚಿತ್ರ ಸಮಸ್ಯೆಗೆ ನಲುಗಿದ ಕುಟುಂಬ: ಇದಕ್ಕಿಂದ ರಕ್ತ ಜಿನುಗುವುದು, ಚಿನ್ನ ಮಾಯ, ಬಟ್ಟೆಗೆ ಬೆಂಕಿ

ಸೋಮನಿಂಗ ತನ್ನದೇ ಅಪ್ರಾಪ್ತ ಐದು ವರ್ಷದ ಮಗಳಿಗೆ ಕಳೆದ ಗಣೇಶ ಚತುರ್ಥಿ ವೇಳೆ ಗಣೇಶನ ಮೂರ್ತಿಗಳನ್ನು ತೋರಿಸುತ್ತೇನೆ ಎಂದು ವಿಜಯಪುರ ನಗರದ ಆಲಕುಂಟೆಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ 2025 ಆಗಸ್ಟ್ 30 ರಂದು ಸಾಯಂಕಾಲ ಅತ್ಯಾಚಾರ ಎಸಗಿದ್ದ. ಈ ಕುರಿತು ಅಪ್ರಾಪ್ತೆಯ ತಾಯಿ ವಿಜಯಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಂ 65(2) ಬಿ ಎನ್ ಎಸ್ – 2023 ಹಾಗೂ 5(ಎಂ) 6 ಪೋಕ್ಸೋ ಕಾಯ್ದೆ 2012ರಂತೆ ದೂರು ದಾಖಲಾಗಿತ್ತು.

ಇದನ್ನೂ ಓದಿ: ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು ಆರೋಪ!

ವಿಚಾರಣೆ ನಡೆಸಿದ ವಿಜಯಪುರದ ವಿಶೇಷ ಪೋಕ್ಸೋ ನ್ಯಾಯಾಧೀಶೆ ಕು. ಸಿಂದು ಪೋತದಾರ ಅವರಿಗೆ ಆರೋಪಿ ಸೋಮನಿಂಗ ಕಳಸದ 20 ವರ್ಷಗಳ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳಾದ ಜಯವಂತ ದುಲಾರಿ, ಆರ್ ಎ ದಿನ್ನಿ, ಪಿ ವೈ ಅಂಬಿಗೇರ, ಸಿಬ್ಬಂದಿಗಳಾದ ವಿಜಯ ಕೋಟ್ಯಾಳ, ಆರ್ ಜಿ ದೇವೂರ, ಎಸ್ ಎಂ ಕೋಳುರಗಿ, ಎಸ್ ಕೆ ಬಡಚಿ, ಕುಮಾರ ದೇಸಾಯಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಶೇಷ ಅಭಿಯೋಜಕ ವಿ ಜಿ ಹಗರಗೊಂಡ ಸರ್ಕಾರದ ಪರವಾಗಿ ವಾದ ಮಂಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *