ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್!


ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್‌ಪಾಸ್!

ಬೆಂಗಳೂರು, ಮಾರ್ಚ್ 07: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು (ಅಕ್ರಮ ವಲಸಿಗರು) ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ.

ಒಂದೇ ದಿನದಲ್ಲಿ ನೂರಾರು ವಿದೇಶಿ ಪ್ರಜೆಗಳ ಪತ್ತೆ

ದಾಖಲೆ ಹೇಳುವಂತೆ ಒಟ್ಟು 200ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಗುರುತಿಸಲಾಗಿದೆ, ನಿನ್ನೆ ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಕಂಡುಹಿಡಿಯಲಾಗಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ತಂಗಿದ್ದ ಈ ವಲಸಿಗರು ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು ಗುರುತಿಸಲಾಗಿದೆ. ಇವರಲ್ಲಿ ಹೆಚ್ಚಿನವರು ಬಾಂಗ್ಲಾದೇಶ ಮೂಲದವರಾಗಿದ್ದರೆ, ಆಫ್ರಿಕಾ ಸೇರಿದಂತೆ ಇನ್ನೂ ಕೆಲವು ದೇಶಗಳಿಂದ ಬಂದವರೂ ಇದ್ದಾರೆ.

ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳು ವಶಕ್ಕೆ ಒಪ್ಪಿಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ಕಾರ್ಯಾಚರಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ FRRO ಅಧಿಕಾರಿಗಳು ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ.

ಇದನ್ನೂ ಓದಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರ ವಿರುದ್ಧ ಭರ್ಜರಿ ಬೇಟೆ, ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯ ವಿಚಾರಣೆ

ತನಿಖೆ ವೇಳೆ ಸಿಕ್ತು ದಾಖಲೆ

ತಪಾಸಣೆ ವೇಳೆ ಕೆಲವರ ಬಳಿ ಆಧಾರ್ ಕಾರ್ಡ್ ಸೇರಿದಂತೆ ಸ್ಥಳೀಯ ದಾಖಲೆಗಳು ಕೂಡಿವೆ. ಅವುಗಳ ನೈಜತೆ ಕುರಿತು ಪರಿಶೀಲನೆ ನಡೆಯುತ್ತಿದೆ. ಪತ್ತೆಯಾದ ವಿದೇಶಿ ಪ್ರಜೆಗಳ ವಿವರಗಳನ್ನು ಸಂಬಂಧಿತ ದೇಶಗಳು ಅಧಿಕಾರಿಗಳು ರವಾನಿಸಿದಾಗ, ಅವರ ಗುರುತು ಮತ್ತು ದಾಖಲೆಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

ಈ ಹಿಂದೆ ಪೊಲೀಸ್ ಆಯುಕ್ತರ ಸೂಚನೆಯಂತೆ ವಿವಿಧ ವಿಭಾಗಗಳ ಅನುಮಾನಾಸ್ಪದ ಪ್ರದೇಶಗಳಲ್ಲಿ ತಲಾಶ್ ದಾಖಲೆಗಳ ಪರಿಶೀಲನೆ ವೇಳೆ ಫೆಬ್ರವರಿ 26 ರಂದು ಒಂದೇ ದಿನ ಸುಮಾರು 2,000ಕ್ಕೂ ಹೆಚ್ಚು ವಿದೇಶಿಗರು ಇದ್ದರು. ಇದರಲ್ಲಿ ಸರಿಯಾದ ದಾಖಲೆಗಳಿಲ್ಲ ಅಥವಾ ವೀಸಾ ಅವಧಿ ಮೀರಿ ವಾಸಿಸುತ್ತಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *