Karnataka Budget 2026: ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್, ಬಡಮಕ್ಕಳಿಗೆ ಲ್ಯಾಪ್‌ಟಾಪ್! Laptop scheme | Karnataka Budget 2026 Laptop For Minority Students Education Boost New Scheme

Karnataka Budget 2026: ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್, ಬಡಮಕ್ಕಳಿಗೆ ಲ್ಯಾಪ್‌ಟಾಪ್! Laptop scheme | Karnataka Budget 2026 Laptop For Minority Students Education Boost New Scheme



Karnataka Budget 2026: ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್, ಬಡಮಕ್ಕಳಿಗೆ ಲ್ಯಾಪ್‌ಟಾಪ್! Laptop scheme | Karnataka Budget 2026 Laptop For Minority Students Education Boost New Scheme

ಕರ್ನಾಟಕ ಬಜೆಟ್ 2026ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆ ಘೋಷಿಸಿದ್ದಾರೆ. ಇದರಲ್ಲಿ ಶಾಲೆಗಳ ಉನ್ನತೀಕರಣ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಹುಬ್ಬಳ್ಳಿ-ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣ, ಮತ್ತು ಮಹಿಳಾ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ ಪ್ರಮುಖವಾಗಿವೆ.

Karnataka Budget 2026: ಅಲ್ಪಸಂಖ್ಯಾತ ಸಮುದಾಯದ ಶಾಲೆಗಳ ಉನ್ನತೀಕರಣಕ್ಕೆ 400 ಕೋಟಿ ರು. ಅನುದಾನ, 5 ಸಾವಿರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿಗೆ ತಲಾ 50 ಸಾವಿರ ರು., ಹುಬ್ಬಳ್ಳಿ, ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣ, ಅಲ್ಪಸಂಖ್ಯಾತ ಮಹಿಳೆಯರ ಸ್ವಾವಲಂಬನೆಗೆ ಮಹಿಳಾ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ ಸೇರಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವು ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

2025-26ನೇ ಸಾಲಿನಲ್ಲಿ 117 ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಉರ್ದು ಶಾಲೆಗಳನ್ನು ಕೆಪಿಎಸ್ ಮಾದರಿಯಲ್ಲಿ 600 ಕೋಟಿ ರು. ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 400 ಕೋಟಿ ರು. ವೆಚ್ಚದಲ್ಲಿ ಇನ್ನೂ 100 ಶಾಲೆಗಳನ್ನು ಉನ್ನತೀಕರಿಸಲಾಗುವುದು. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಉನ್ನತ ಮಟ್ಟದ ಡಿಜಿಟಲ್ ಶಿಕ್ಷಣ ಪ್ರೋತ್ಸಾಹಿಸಲು 5 ಸಾವಿರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿಗೆ ತಲಾ 50 ಸಾವಿರ ರು. ನೀಡಲಾಗುವುದು.

ಹಜ್ ಯಾತ್ರಿಕರು, ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಒದಗಿಸಲು ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನ ನಿರ್ಮಿಸಲಾಗುವುದು. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 25 ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಇದಲ್ಲದೆ ಸಿಬಿಎಸ್‌ಇ ಪಠ್ಯಕ್ರಮದಡಿ 10 ಕೋಟಿ ರು. ಅನುದಾನದಲ್ಲಿ 10 ವಸತಿ ಶಾಲೆಗಳನ್ನು ಆರಂಭಿಸಲಾಗುವುದು.

25 ಹಾಸ್ಟೆಲ್‌ ಪ್ರಾರಂಭ:

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಮತ್ತಿತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದಿಸಲಾಗುವುದು. ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಆರಂಭಿಸಲಾಗುವುದು. ಹಾಲಿ ಇರುವ ವಿದ್ಯಾರ್ಥಿ ನಿಲಯಗಳ ಸಂಖ್ಯೆಯನ್ನು 25 ರಿಂದ 50 ಕ್ಕೆ ಹೆಚ್ಚಿಸಲಾಗುವುದು. 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಆರಂಭಿಸಲಾಗುವುದು. 18 ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನೂ ತೆರೆಯಲಾಗುವುದು.

ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಿ, ಕೆಸೆಟ್‌, ನೀಟ್‌ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ವಸತಿ ಶಾಲೆ ಸ್ಥಾಪಿಸಲಾಗುವುದು. 20 ವಸತಿ ಶಾಲೆಗಳ ಮಕ್ಕಳಿಗೆ ಸಿಇಟಿ, ಜೆಇಇ, ನೀಟ್‌ ವಿಶೇಷ ತರಬೇತಿ ನೀಡಲಾಗುವುದು.

ವಕ್ಫ್‌ ಆಸ್ತಿಗಳ ಅಭಿವೃದ್ಧಿ:

ಆಯ್ದ ವಕ್ಫ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರ ಪ್ರಾರಂಭಿಸಲಾಗುವುದು. ಬೆಂಗಳೂರಿನಲ್ಲಿ 100 ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರ ನಾಲ್ಕು ವಸತಿ ನಿಲಯ ಪ್ರಾರಂಭಿಸಲಾಗುವುದು. 100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮ ಪ್ರಾರಂಭಿಸಲು ನೆರವು ನೀಡಲಾಗುವುದು. ವಾಣಿಜ್ಯ ಉದ್ದೇಶಕ್ಕೆ ಬೇಡಿಕೆಯಿರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.

ನಿರುದ್ಯೋಗಿ ಯುವಕ, ಯುವತಿಯರಿಗೆ ಫಾಸ್ಟ್ ಫುಡ್‌ ಟ್ರಕ್‌ ಟ್ರೈಲರ್, ಮೊಬೈಲ್‌ ಕಿಚನ್‌ ಫುಡ್‌ ಕಿಯೋಸ್ಕ್ ಸೌಲಭ್ಯಕ್ಕೆ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ಮೂರು ಲಕ್ಷ ರು. ಸಹಾಯಧನ ನೀಡಲಾಗುವುದು. ವಕ್ಫ್ ಸಂಸ್ಥೆಗಳ 31 ಮಹಿಳಾ ಪಿಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ಸವಣೂರಿನಲ್ಲಿ ಹೊಸ ಮಹಿಳಾ ಪಿಯು ಕಾಲೇಜು ಪ್ರಾರಂಭಿಸಲಾಗುವುದು.

ಜೈನ, ಬೌದ್ಧ, ಸಿಖ್‌ ಸಮುದಾಯಕ್ಕೆ 100 ಕೋಟಿ

ಜೈನ, ಬೌದ್ಧ ಮತ್ತು ಸಿಖ್‌ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ರು. ಅನುದಾನ ನೀಡಿಕೆ. ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ 6 ಸಾವಿರ ರು. ಮಾಸಿಕ ಗೌರವಧನ ನೀಡಲಾಗುವುದು. ಬೀದರ್‌ನ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪಿಸಲಾಗುವುದು. ಕೆಂಗೇರಿಯ ಆಸಿರ್ವನಂ ಬೆನಿಡಿಕ್ಟಿನ್‌ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲು ಐದು ಕೋಟಿ ರು. ನೀಡಲಾಗುವುದು.

ಇನ್ನು ಹಿರಿಯ ನಾಗರಿಕರಿಗೆ ಆರೋಗ್ಯ ಮತ್ತು ಆರೈಕೆ ಸೇವೆ ಒದಗಿಸಲು ಕ್ರೈಸ್ತ ಸಂಸ್ಥೆಗಳು ನಡೆಸುವ 10 ವೃದ್ಧಾಶ್ರಮಗಳಲ್ಲಿ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕ ಸ್ಥಾಪಿಸಲು ತಲಾ 50 ಲಕ್ಷದಂತೆ ಐದು ಕೋಟಿ ರು. ಅನುದಾನ ಒದಗಿಸಲು ನಿರ್ಧರಿಸಲಾಗಿದೆ.



Source link

Leave a Reply

Your email address will not be published. Required fields are marked *