Headlines

ಹಳಿ ತಪ್ಪಿದ ಆಡಳಿತ ಸರಿದಾರಿಗೆ ತರುವ ಜವಾಬ್ದಾರಿ ಪ್ರತಿಪಕ್ಷದ್ದು : ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ | Opposition Must Set Derailing Governance Back On Track Thammanna Gowda

ಹಳಿ ತಪ್ಪಿದ ಆಡಳಿತ ಸರಿದಾರಿಗೆ ತರುವ ಜವಾಬ್ದಾರಿ ಪ್ರತಿಪಕ್ಷದ್ದು : ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ | Opposition Must Set Derailing Governance Back On Track Thammanna Gowda



ಹಳಿ ತಪ್ಪಿದ ಆಡಳಿತ ಸರಿದಾರಿಗೆ ತರುವ ಜವಾಬ್ದಾರಿ ಪ್ರತಿಪಕ್ಷದ್ದು : ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ | Opposition Must Set Derailing Governance Back On Track Thammanna Gowda

ಆಡಳಿತವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ. ತಮ್ಮೇಶ್ ಗೌಡ ಅಭಿಪ್ರಾಯಪಟ್ಟರು.

ಬ್ಯಾಟರಾಯನಪುರ : ಆಡಳಿತವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ. ತಮ್ಮೇಶ್ ಗೌಡ ಅಭಿಪ್ರಾಯಪಟ್ಟರು.ಬ್ಯಾಟರಾಯನಪುರ ಬಿಜೆಪಿ ನಗರ ಮಂಡಲ ವತಿಯಿಂದ ಕ್ಷೇತ್ರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಸುಮ್ಮನೆ ಕೂರುವುದು ವಿರೋಧ ಪಕ್ಷದ ವರ್ತನೆಯಾಗಬಾರದು

ಆಡಳಿತದಲ್ಲಿ ಆಗುವ ಅನಾಹುತಗಳನ್ನು ನೋಡಿಕೊಂಡು ಸುಮ್ಮನೆ ಕೂರುವುದು ವಿರೋಧ ಪಕ್ಷದ ವರ್ತನೆಯಾಗಬಾರದು, ಆಡಳಿತ ದಿಕ್ಕು ತಪ್ಪಿದಾಗ ಅದರ ವಿರುದ್ಧ ಗಟ್ಟಿ ಧ್ವನಿ ಎತ್ತುವುದು, ಹೋರಾಟಗಳ ಮೂಲಕ ಆಡಳಿತವನ್ನು ಸರಿದಾರಿಗೆ ತರುವುದು ವಿರೋಧ ಪಕ್ಷಗಳ ಜವಾಬ್ದಾರಿಯಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕನಾಗಿ ಆಡಳಿತ ಪಕ್ಷದ ವೈಫಲ್ಯಗಳ ವಿರುದ್ಧ ಗಟ್ಟಿಯಾದ ಧ್ವನಿ ಎತ್ತುವುದು ಹಾಗೂ ಹೋರಾಟಗಳನ್ನು ರೂಪಿಸುವ ಮೂಲಕ ಆಡಳಿತ ಪಕ್ಷದ ಕಿವಿ ಹಿಂಡುವ ಕೆಲಸವನ್ನು ಪ್ರಾಮಾಣಿಕವಾಗಿ ಕೈಗೊಂಡಿದ್ದೇನೆ, ಈ ಬಗ್ಗೆ ಆತ್ಮತೃಪ್ತಿ ಇದೆ ಎಂದು ಅವರು ಹೇಳಿದರು.

ಬ್ಯಾಟರಾಯನಪುರ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿ ವಾರ್ಡ್‌ಗಳಲ್ಲಿರುವ ನೀರಿನ ಸಮಸ್ಯೆ ಸೇರಿ ವಿವಿಧ ಸಮಸ್ಯೆಗಳನ್ನು ಪಟ್ಟಿ ಮಾಡಿ, ಮಾ.16ಕ್ಕೆ ಜಿಬಿಎ ಮುಖ್ಯ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಪ್ರತಿ ವಾರ್ಡ್‌ನಲ್ಲಿನ ಬಿಜೆಪಿ ಮುಖಂಡರು ವಾರ್ಡ್‌ಗಳಲ್ಲಿರುವ ಸಮಸ್ಯೆಗಳನ್ನು ಪಟ್ಟಿ ಮಾಡಬೇಕು ಎಂದು ಸೂಚಿಸಿದರು.

ನಾನು ಮೋದಿ ನಾನು ಬಿಜೆಪಿ ಅಭಿಯಾನ:

ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಬಲವರ್ಧನೆಯ ನಿಟ್ಟಿನಲ್ಲಿ ””ನಾನು ಮೋದಿ ನಾನು ಬಿಜೆಪಿ”” ಎಂಬ ಅಭಿಯಾನ ಕೈಗೊಳ್ಳಲು ನಿರ್ಧರಿಸಿದ್ದು ಈ ಅಭಿಯಾನದ ಅಡಿಯಲ್ಲಿ ಪ್ರತಿ ಬೂತ್ ನ ಅಧ್ಯಕ್ಷರು 50 ಮನೆಗಳ ಮೇಲೆ ಬಿಜೆಪಿ ಬಾವುಟ ಕಟ್ಟುವುದು, ಮೋದಿಯವರ ಆಡಳಿತದಲ್ಲಿ ಕೈಗೊಂಡಿರುವ ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಅರಿವು ಮೂಡಿಸುವುದು, ರಾಜ್ಯ ಸರ್ಕಾರದ ವೖಫಲ್ಯಗಳು, ಬ್ಯಾಟರಾಯನಪುರ ಕ್ಷೇತ್ರದಲ್ಲಿನ ಜ್ವಲಂತ ಸಮಸ್ಯೆಗಳ ಕುರಿತು ಜನಜಾಗೃತಿ ಮೂಡಿಸುವುದು ಅಭಿಯಾನದ ಮುಖ್ಯ ಧ್ಯೇಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂ. ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ಹರೀಶ್, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರಿ, ಶರಣು ತಳ್ಳಿಕೇರಿ, ಕಾನೂನು ಪ್ರಕೋಷ್ಠ ಸಂಚಾಲಕ ವಸಂತಕುಮಾರ್, ನಗರ ಮಂಡಲ ಬಿಜೆಪಿ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾ.ಮಂಡಲ ಅಧ್ಯಕ್ಷ ಹನುಮಂತಗೌಡ, ಬೆಂ.ವಿಭಾಗೀಯ ಪ್ರಭಾರಿ ಎಸ್.ಎನ್. ರಾಜಣ್ಣ, ಸಹಪ್ರಭಾರಿ ಕಿರಣ್ ಬಾಬು, ಬಿಜೆಪಿ ಮುಖಂಡ ಪಿ.ಕೆ.ರಾಜಗೋಪಾಲ್, ಅಗ್ರಹಾರ ನರಸಿಂಹಮೂರ್ತಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್ ಕುಮಾರ್, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಗೌಡ, ಓಬಿಸಿ ಮೋರ್ಚಾ ಅಧ್ಯಕ್ಷ ಮುನಿಸ್ವಾಮಿ ಒಡೆಯರ್(ಆನಂದ್ ಮಾಸ್ಟರ್), ಮನೋಹರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ, ನಗರ ಮಂಡಲ ಉಪಾಧ್ಯಕ್ಷ ಚಂದ್ರಶೇಖರ್ ರೆಡ್ಡಿ, ಡಾ. ಯೋಗೀಶ್, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಇ., ಸಂತೋಷ್ ರೆಡ್ಡಿ, ಶ್ರೀನಾಥ್, ಸುಬ್ಬು, ಮಧುಸೂದನ್ ಮತ್ತಿತರರು ಇದ್ದರು.



Source link

Leave a Reply

Your email address will not be published. Required fields are marked *