
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಇದೀಗ ನೆರೆಯ ಕೇರಳದಲ್ಲೂ ಅದೇ ದಾಳ ಪ್ರಯೋಗಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು, ವಿದ್ಯಾರ್ಥಿನಿಯರು, ವೃದ್ಧರು, ಉದ್ಯಮಿಗಳನ್ನು ಗುರಿಯಾಗಿಸಿದ 5 ಯೋಜನೆ
ತಿರುವನಂತಪುರಂ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಇದೀಗ ನೆರೆಯ ಕೇರಳದಲ್ಲೂ ಅದೇ ದಾಳ ಪ್ರಯೋಗಿಸಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು, ವಿದ್ಯಾರ್ಥಿನಿಯರು, ವೃದ್ಧರು, ಉದ್ಯಮಿಗಳನ್ನು ಗುರಿಯಾಗಿಸಿದ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಪಕ್ಷ ಘೋಷಿಸಿದೆ.
ಯುಡಿಎಫ್ ಮೈತ್ರಿ ಕೂಟದ ಭಾಗವಾಗಿರುವ ಕಾಂಗ್ರೆಸ್
ಕೇರಳದಲ್ಲಿ ಯುಡಿಎಫ್ ಮೈತ್ರಿ ಕೂಟದ ಭಾಗವಾಗಿರುವ ಕಾಂಗ್ರೆಸ್ ಈ ಘೋಷಣೆ ಮಾಡಿದೆ. ಶನಿವಾರ ಇಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಪಂಚ ಗ್ಯಾರಂಟಿಗಳನ್ನು ಪ್ರಕಟಿಸಿದರು.
ಏನೇನು ಗ್ಯಾರಂಟಿ?:
ಕರ್ನಾಟಕದ ಶಕ್ತಿ ಯೋಜನೆಯಂತೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಕಾಲೇಜು ವಿದ್ಯಾರ್ಥಿನಿಯರಿಗೆ ಮಾಸಿಕ 1 ಸಾವಿರ ರು., ವೃದ್ಧರು, ಅಂಗವಿಕಲರು, ವಿಧವೆಯರು ಸೇರಿದ ವಿವಿಧ ವರ್ಗದವರಿಗೆ ಕಲ್ಯಾಣ ಪಿಂಚಣಿ ಯೋಜನೆ ಮೊತ್ತ 1600 ರು.ನಿಂದ 3 ಸಾವಿರ ರು.ಗೆ ಏರಿಕೆ, ಮಾಜಿ ಸಿಎಂ ಊಮ್ಮನ್ ಚಾಂಡಿ ಹೆಸರಿನಲ್ಲಿ ಅರ್ಹ ಕುಟುಂಬಕ್ಕೆ 25 ಲಕ್ಷ ರು.ತನಕ ಆರೋಗ್ಯ ವಿಮೆ, ಸಣ್ಣ ಉದ್ದಿಮೆದಾರರಿಗೆ 5 ಲಕ್ಷ ರು. ತನಕ ಬಡ್ಡಿ ರಹಿತ ಸಾಲ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.