
ಬೆಂಗಳೂರು, ಮಾರ್ಚ್ 08: ನಗರದ ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಆಹ್ವಾನಿತ ಯುವಕರನ್ನು ಸೈಫ್ ಪಾಷಾ, ಯೂಸುಫ್ ಖಾನ್ ಮತ್ತು ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರೆ, ಮೃತದೇಹಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಗ್ಗಲಿಪುರ ಪೊಲೀಸ್ ಠಾಣಾ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.