
ಚಾಮರಾಜನಗರ, ಮಾರ್ಚ್ 08: ಬಜೆಟ್ ನಲ್ಲಿ ಉಡುತೊರೆ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಗೆ 490 ಕೋಟಿ ರೂ. ನೀರಾವರಿ ಯೋಜನೆಗೆ ಅಸ್ತು ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಹೆಸರಿನಲ್ಲಿ ಮಾದಪ್ಪನಿಗೆ ಜೆಡಿಎಸ್ ಹನೂರು ಶಾಸಕ ಮಂಜುನಾಥ್‌ರಿಂದ ಪೂಜೆ ಸಲ್ಲಿಸಲಾಗಿದೆ. ಉಡುತೊರೆ ಜಲಾಶಯಕ್ಕೆ ನೀರು ತುಂಬಿಸಬೇಕೆಂದು ಒತ್ತಾಯಿಸಿದರು. 490 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಮಾಡಿಸುವುದಾಗಿ ಬಜೆಟ್ ನಲ್ಲಿ ಅನುದಾನ ನೀಡಲಾಗಿದೆ. ಸಿಎಂ, ಡಿಸಿಎಂ ಸೇರಿದಂತೆ ಸಚಿವರಾದ ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ ಹೆಸರಲ್ಲೂ ಪೂಜೆ ಸಲ್ಲಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.