Headlines

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ


ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮಾರ್ಚ್ 08: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡಿದ್ದಾರೆ ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (ಮಲ್ಲಿಕಾರ್ಜುನ ಖರ್ಗೆ)

ವಾಗ್ದಾಳಿ ಮಾಡಿದ್ದಾರೆ.

ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಾರೆ

ಕಲಬುರಗಿ ಜಿಲ್ಲೆಯ ಚಿತ್ತಾಪುರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಟ್ರಂಪ್ ನನ್ನ ಸ್ನೇಹಿತ ಅಂತಾ ಪ್ರಧಾನಿ ಮೋದಿ ಹೇಳಿದ್ದಾರೆ. ಟ್ರಂಪ್ ಅತಿ ಹೆಚ್ಚು ಟ್ಯಾಕ್ಸ್ ನಮ್ಮ ಮೇಲೆ ಹಾಕುತ್ತಿದ್ದಾರೆ. ಖಮೇನಿ ಹತ್ಯೆ ಮಾಡಿದರೆ ವಿಶ್ವ ಹೇಗೆ ಸುರಕ್ಷಿತ ಆಗುತ್ತೆ? ನೀವು ಎಲ್ಲರನ್ನೂ ಕೊಲ್ಲುತ್ತಾ ಹೋದರೆ ಎಲ್ಲಿ ಶಾಂತಿ ಬರುತ್ತೆ. ಅಮೆರಿಕ ಜೊತೆಗೂಡಿ ನಮ್ಮ ದೇಶವನ್ನು ಹಾಳು ಮಾಡುತ್ತಿರುವಿರಿ. ನೀವು ಸ್ವಾಭಿಮಾನ ಬೆಳೆಸಿಕೊಳ್ಳಿ. ಬ್ರಿಟಿಷರನ್ನ ಓದಿಸಿದ್ದೆವು. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಟ್ವೀಟ್

ಜವಾಹರ್ ಲಾಲ್ ನೆಹರು ಪ್ರಧಾನಿಯಾಗಿದ್ದಾಗ ‘ನಾನ್ ಅಲೈನ್ ಮೆಂಟ್’ ಸಿದ್ಧಾಂತ ಅಳವಡಿಸಿಕೊಂಡಿದ್ದು ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು? ಮೋದಿ ಇಸ್ರೇಲ್ಗೆ ಹೋಗಿ ಬಂದ ನಂತರ ಅದು ಇರಾನ್ ಮೇಲೆ ಬಾಂಬ್ ಹಾಕಿತು. ಇರಾನ್ ದೇಶದ ಮಖ್ಯಸ್ಥ ಖಮೇನಿಯವರನ್ನು ಅಮೆರಿಕದವರು ಹತ್ಯೆ ಮಾಡಿದರು. ಇದು ವಿಶ್ವ ಶಾಂತಿಯಿಂದ ಇರಲು ಸಾಧ್ಯಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಭಾರತ ದೇಶದ 65% ರೈತರು ಕೃಷಿ ಅವಲಂಬಿತರಾಗಿದ್ದರೆ ಅಮೆರಿಕಾದಲ್ಲಿ 3% ಅವಲಂವಿತ ಇದೆ. ನಮ್ಮ ದೇಶದ ಉತ್ಪನ್ನಗಳಿಗೆ ಅಮೆರಿಕಾದಲ್ಲಿ ಮನಬಂದಂತೆ ತೆರಿಗೆ ಹಾಕಲಾಗುತ್ತಿದೆ. ಆದರೆ, ಅಮೆರಿಕಾದ ಉತ್ಪನ್ನಗಳ ಮೇಲೆ ಯಾವುದೇ ತೆರಿಗೆಯನ್ನು ಭಾರತ ಹೇರುತ್ತಿಲ್ಲ. ಟ್ರಂಪ್ ಜೊತೆ ದಿನಾಲೂ ಮಾತನಾಡುತ್ತ ಮೋದಿ ಹೇಳುತ್ತಾರೆ. ತೆರಿಗೆ ಹಾಕುವ ಬಗ್ಗೆ ಮಾತನಾಡುತ್ತಾರಾ? ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಗೆ ಹೆದರಿಸುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *