Headlines

ಬಿಸಿಲಿನ ತಾಪಕ್ಕೆ ‘ಬೆಂದಕಾಳೂರು’ ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬಿಸಿಲಿನ ತಾಪಕ್ಕೆ ‘ಬೆಂದಕಾಳೂರು’ ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್


ಬಿಸಿಲಿನ ತಾಪಕ್ಕೆ 'ಬೆಂದಕಾಳೂರು' ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬೆಂಗಳೂರು, ಮಾರ್ಚ್ 09: ಸಿಲಿಕಾನ್ ಸಿಟಿ ಬೆಂಗಳೂರು (ಬೆಂಗಳೂರು) ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ, ಜನರು ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದಾರೆ. ಫೆಬ್ರುವರಿಯಿಂದ ಆರಂಭವಾದ ಬೇಸಿಗೆಯ ತಾಪ ಇನ್ನೂ ಕಡಿಮೆಯಾಗದೇ ಇರುವ ಹಿನ್ನೆಲೆ, ತಂಪಿಗಾಗಿ ಜನರ ಮಣ್ಣಿನ ಮಡಿಕೆ ಮತ್ತು ಎಳನೀರಿನ ಮೊರೆ ಹೋಗುತ್ತಿರುವ ದೃಶ್ಯಗಳು ಮಾರುಕಟ್ಟೆಗಳಲ್ಲಿ ಕಂಡು ಬರುತ್ತಿವೆ.

ಮಣ್ಣಿನ ಮಡಿಕೆ, ಎಳನೀರಿಗೆ ಹೆಚ್ಚಿನ ಬೇಡಿಕೆ

ಆರಂಭಿಕ ಕಾಲ ಪ್ರಾರಂಭವಾಗುವಾಗಲೇ ಬೆಂಗಳೂರಿನ ಜನರ ಮಣ್ಣಿನ ಮಡಿಕೆ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಬಾರಿ ಕೂಡ ಮಣ್ಣಿನ ಮಡಿಕೆಗಳಿಗೆ ಭಾರೀ ಬೇಡಿಕೆ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಮಡಿಕೆ ಖರೀದಿಸುವವರ ಸಂಖ್ಯೆ ಹೆಚ್ಚು ಎಂದು ವ್ಯಾಪಾರಿಗಳು. ಬಣ್ಣದ ಬಣ್ಣದ ಮಡಿಕೆಗಳು, ಟ್ಯಾಪ್ ಹೊಂದಿರುವ ಮಡಿಕೆಗಳು, ಮಣ್ಣಿನ ಲೋಟಗಳು ಮತ್ತು ಆಕರ್ಷಕ ವಿನ್ಯಾಸದ ಬಾಟಲ್‌ಗಳು ಜನರನ್ನು ಸೆಳೆಯುತ್ತಿವೆ. ಮಡಿಕೆಗಳ ಬೆಲೆ 300 ರೂಪಾಯಿಯಿಂದ 1500 ರೂಪಾಯಿಗಳಿಗೆ ಮಾರಾಟವಾಗುತ್ತಿವೆ, ಆರೋಗ್ಯಕರವಾಗಿರುವ ಕಾರಣ ಜನರು ಹೆಚ್ಚಾಗಿ ಖರೀದಿಸುತ್ತಿದ್ದಾರೆ.

ಇನ್ನೊಂದೆಡೆ, ಬಿಸಿಲಿನ ತಾಪ ಹೆಚ್ಚಾದ ಎಳನೀರಿನ ಬೇಡಿಕೆಯೂ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ 20 ರಿಂದ 30 ರೂಪಾಯಿಗೆ ಸಿಗುತ್ತಿದ್ದ ಎಳನೀರು ಈಗ 60 ರಿಂದ 70 ರೂಪಾಯಿಗಳಿಗೆ ಮಾರಾಟವಾಗುತ್ತಿದೆ. ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಜನರು ಎಳನೀರು ಸೇವಿಸುವತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ.

ಇದನ್ನೂ ಓದಿ ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಒಟ್ಟಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಜನರು ತಂಪು ನೀಡುವ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿರುವಾಗ, ಮಣ್ಣಿನ ಮಡಿಕೆ ಮತ್ತು ಎಳನೀರಿನ ಮಾರಾಟದಲ್ಲಿ ಏರಿಕೆ ಕಂಡುಬರುತ್ತದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಆರೋಗ್ಯದ ಬಗ್ಗೆ ಜನರ ಜಾಗ್ರತೆ ವಹಿಸುವ ಅಗತ್ಯವಿದೆ.

ಅರುಣ್ ಕುಮಾರ್ ಟಿವಿ9 ಬೆಂಗಳೂರು

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *