ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ -ಮತದಾರರ ಕರಡುಪಟ್ಟಿ ಪ್ರಕಟ ಗ್ರೇಟರ್‌ ಬೆಂಗಳೂರಲ್ಲಿ 89 ಲಕ್ಷ ಮತದಾರರು | Draft Voters List Released 89 Lakh Electors In Greater Bengaluru

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ಬಳಿಕ ಐದು ಪಾಲಿಕೆಗಳಿಗೆ ಮೊದಲ ಬಾರಿ ನಡೆಯಲಿರುವ ಚುನಾವಣೆಗೆ ಒಟ್ಟು 88,91,411 ಜನರು ಮತದಾನದ ಹಕ್ಕು ಹೊಂದಿದ್ದಾರೆ. ಸೋಮವಾರ ಜಿಬಿಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕರಡು ಮತದಾರರ ಪಟ್ಟಿಯ ಕುರಿತು ಮಾಹಿತಿ ಹಂಚಿಕೊಂಡ ಜಿಲ್ಲಾ ಚುನಾವಣಾಧಿಕಾರಿ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ಬಳಿಕ ಐದು ಪಾಲಿಕೆಗಳಿಗೆ ಮೊದಲ ಬಾರಿ ನಡೆಯಲಿರುವ ಚುನಾವಣೆಗೆ ಒಟ್ಟು 88,91,411 ಜನರು ಮತದಾನದ ಹಕ್ಕು ಹೊಂದಿದ್ದಾರೆ.

ಮಾಹಿತಿ ಹಂಚಿಕೊಂಡ ಜಿಲ್ಲಾ ಚುನಾವಣಾಧಿಕಾರಿ

ಸೋಮವಾರ ಜಿಬಿಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕರಡು ಮತದಾರರ ಪಟ್ಟಿಯ ಕುರಿತು ಮಾಹಿತಿ ಹಂಚಿಕೊಂಡ ಜಿಲ್ಲಾ ಚುನಾವಣಾಧಿ ಕಾರಿಯೂ ಆಗಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ನಗರ ಪಾಲಿಕೆಗಳಲ್ಲಿ 369 ವಾರ್ಡ್‌ಗಳವೆ. 45,69,752 ಪುರುಷರು, 43,21,143 ಮಹಿಳೆಯರು ಹಾಗೂ 1,635 ಇತರೆ ಮತದಾರರು ಇದ್ದಾರೆ. 8,024 ಮತಟ್ಟೆಗಳಿವೆ ಎಂದು ವಿವರಿಸಿದರು.

ಕರಡು ಪಟ್ಟಿಗೆ ಮಾ.10 ರಿಂದ 16ರವರೆಗೆ ಆಕ್ಷೇಪಣೆ

ಕರಡು ಪಟ್ಟಿಗೆ ಮಾ.10ರಿಂದ 16ರವರೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದ್ದು, ಜಿಬಿಎ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಏ.6ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ದಕ್ಷಿಣ ನಗರಪಾಲಿಕೆಯ ಸುಬ್ರಮಣ್ಯಪುರ ವಾರ್ಡ್ ಸಂಖ್ಯೆ 51ರಲ್ಲಿ ಅತಿ ಹೆಚ್ಚು ಅಂದರೆ 54,026 ಮತದಾರರನ್ನು ಹೊಂದಿದೆ. ಪೂರ್ವ ಪಾಲಿಕೆಯ ಕೊತ್ತೂರು ವಾರ್ಡ್ ಸಂಖ್ಯೆ 16ರಲ್ಲಿ ಅತಿ ಕಡಿಮೆ ಅಂದರೆ 10,940 ಮತದಾರರನ್ನು ಹೊಂದಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

Source link

Leave a Reply

Your email address will not be published. Required fields are marked *