Headlines

ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ

ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ


ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ರೂ. ಪಂಗನಾಮ

ಬೆಂಗಳೂರು, ಮಾರ್ಚ್ 10: ವರ್ಗಾವಣೆಯ ಆಸೆಯಿಂದ ಗಿಳಿಶಾಸ್ತ್ರ ಹೇಳುವವನನ್ನು ನಂಬಿದ ಆದಾಯ ತೆರಿಗೆ ಇಲಾಖೆ (ಐಟಿ) ಒಬ್ಬ ಅಧಿಕಾರಿಯೊಬ್ಬರು ರೂಪಾಯಿ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ (ಬೆಂಗಳೂರು) ಬೆಳಕಿಗೆ ಬಂದಿದೆ. ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಪಡೆದು ಪರಾರಿಯಾದ, ಗಿಳಿಶಾಸ್ತ್ರ ಹೇಳುತ್ತಿದ್ದ ವ್ಯಕ್ತಿಗಾಗಿ ಶೋಧ ನಡೆಸುತ್ತಿದ್ದಾರೆ. ಕೆಲವು ವರ್ಷಗಳಿಂದ ಬೆಂಗಳೂರಿನ ಐಟಿ ಇಲಾಖೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರು ಕಳೆದ ಡಿಸೆಂಬರ್ ತಿಂಗಳಿನಲ್ಲಿ ರಸ್ತೆಗೆ ತೆರಳುತ್ತಿದ್ದ ವೇಳೆ ಗಿಳಿಶಾಸ್ತ್ರ ಹೇಳುತ್ತಿದ್ದ ಶೇಖರ್ ಎಂಬಾತನ ಪರಿಚಯವಾಗಿತ್ತು. ಭಾರತಿನಗರದ ಶ್ರೀ ಸರ್ಕಲ್ ಬಳಿ ಗಿಳಿಶಾಸ್ತ್ರ ಹೇಳುತ್ತಿದ್ದ ಶೇಖರ್ ಎಂಬಾತ, ಮುಖ ನೋಡಿ ಜಾತಕ ಹಾಗೂ ಭವಿಷ್ಯ ಹೇಳುತ್ತೇನೆ ಎಂದು ಅಧಿಕಾರಿಯನ್ನು ನಂಬಿದ್ದರು.

ವಿಶೇಷ ಪೂಜೆ ನೆಪದಲ್ಲಿ 50 ಸಾವಿರ ರೂ. ಲೂಟಿ

ಜೀವನದಲ್ಲಿ ಅಭಿವೃದ್ಧಿ ಆಗಬೇಕಾದರೆ ವಿಶೇಷ ಪೂಜೆ ಮಾಡಬೇಕು ಎಂದು ಹೇಳಿದ ಗಿಳಿಶಾಸ್ತ್ರದ ಶೇಖರ್, ಅದಕ್ಕಾಗಿ ಸುಮಾರು 50 ಸಾವಿರ ರೂಪಾಯಿ ಪಡೆದು ಪೂಜೆ ಸಲ್ಲಿಸಿದ್ದಾರೆ. ನಂತರವೂ ಆ ಅಧಿಕಾರಿಗೆ ಪದೇ ಪದೇ ಕರೆ ಮಾಡಿ ವಿವಿಧ ಪೂಜೆಗಳ ಬಗ್ಗೆ ಹೇಳುತ್ತಿದ್ದರು.

ಇದೇ ವೇಳೆ ವರ್ಗಾವಣೆಯ ವಿಚಾರವಾಗಿ ಗಿಳಿಶಾಸ್ತ್ರ ಕೇಳಿದಾಗ, ದೊಡ್ಡ ಪೂಜೆ ಮಾಡಬೇಕು. ಅದಕ್ಕಾಗಿ ಮನೆಯಲ್ಲಿ ಚಿನ್ನಾಭರಣಗಳನ್ನು ತರಬೇಕು ಎಂದು ಶೇಖರ್ ಸಲಹೆ ನೀಡಿದ್ದರು. ಅವನ ಮಾತನ್ನು ನಂಬಿದ ಐಟಿ ಅಧಿಕಾರಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 194 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ 300 ಗ್ರಾಂ ಬೆಳ್ಳಿಯನ್ನು ತೆಗೆದುಕೊಂಡು ಆತನಿಗೆ ನೀಡಿದ್ದರು.

ಒಂದು ದಿನದಲ್ಲೇ ವಾಪಸ್ ಕೊಡುತ್ತೇನೆ ಎಂದು ಹೇಳಿದ್ದ ಶೇಖರ್, ನಂತರ ‘ಪೂಜೆ ಇನ್ನೂ ಮುಗಿದಿಲ್ಲ’ ಎಂದು ಹೇಳಿ ಸುಮಾರು ಒಂದು ವಾರ ಕಾಲ ಅಧಿಕಾರಿಯನ್ನು ಸತಾಯಿಸಿದ್ದಾರೆ. ಬಳಿಕ ಐಟಿ ಅಧಿಕಾರಿ ಭಾರತಿನಗರದ ಶ್ರೀ ಸರ್ಕಲ್ ಬಳಿ ಹೋದಾಗ ಅಲ್ಲಿಗೆ ಗಿಳಿಯೂ ಇಲ್ಲ, ಗಿಳಿಶಾಸ್ತ್ರ ಹೇಳುತ್ತಿದ್ದ ಶೇಖರ್ ಕೂಡ ಇರಲಿಲ್ಲ. ಅದಗಲೇ ಪರಾರಿಯಾಗಿದ್ದ.

ಇದನ್ನೂ ಓದಿ: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್ ಪೊಲೀಸ್ ಬಲೆಗೆ

ವಂಚನೆಗೆ ಒಳಗಾದ ವಿಚಾರ ತಿಳಿದು ಐಟಿ ಅಧಿಕಾರಿಯು ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕಾಗಿ ಆರೋಪಿ ಶೇಖರ್‌ ಹುಡುಕಾಟ ಆರಂಭಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *