ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ

ನವದೆಹಲಿ: ದೆಹಲಿಗೆ ಬಂದರೆ ನಾನು ಎಲ್ಲ ನಾಯಕರನ್ನೂ ಭೇಟಿ ಮಾಡುತ್ತೇನೆ. ಆದರೆ, ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದಾಗ, ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವು (ಮಾಧ್ಯಮಗಳು), ಡಿಕೆಶಿ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ. ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದರು. ಪುಣೆಯಲ್ಲಿರುವ ನನ್ನ ಸ್ನೇಹಿತರ ಮನೆಯ ಮದುವೆ ಕಾರ್ಯಕ್ರಮವಿತ್ತು. ಹೀಗಾಗಿ, ದೆಹಲಿಗೆ ಬಂದಿದ್ದೆ. ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೆ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವಿದೆ ಎಂದು ಹೇಳಿದರು.

ಡಿಕೆ ಬೆಂಗೂರಿಗೆ ವಾಪಸ್ ರದ್ದು, ರಾಜಕೀಯ ಕೌತುಕ

ನವದೆಹಲಿ: ಖಾಸಗಿ ಕಾರ್ಯಕ್ರಮ ನಿಮಿತ್ತ ದೆಹಲಿಗೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಬೆಳಗ್ಗೆ 8 ಗಂಟೆಯ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಮರಳಬೇಕಿತ್ತು. ಆದರೆ, ಬೆಳಗ್ಗೆಯ ಪ್ರಯಾಣವನ್ನು ಅವರು ದಿಢೀರ್ ಆಗಿ ರದ್ದುಗೊಳಿಸಿ, ದೆಹಲಿಯಲ್ಲೇ ಉಳಿದರು., ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರಿಂದ ಅವರು ಸ್ಪಷ್ಟತೆ ಬಯಸಿ ದೆಹಲಿಯಲ್ಲೇ ಉಳಿದರಾ ಎಂಬ ಕುತೂಹಲ ಮೂಡಿತು. ಈ ಮಧ್ಯೆ, ದೆಹಲಿಯಲ್ಲಿ ಅವರು ಸೋಮವಾರ ಕಲ್ಯಾಜಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: ದಾವಣಗೆರೆ: ಪ್ರೇಮಕ್ಕೆ ಮನೆಯವರ ವಿರೋಧ: ತುಂಗಭದ್ರ ನದಿಗೆ ಹಾರಿದ ಹಿಂದೂ ಹುಡುಗಿ ಮುಸ್ಲಿಂ ಹುಡುಗ

Source link
ನೀವು ವರದಿ ಮಾಡುವಂತೆಯೇ ನಾನು ಕಾಯುತ್ತಾ ಕುಳಿತ್ತಿರುವೆ: ಡಿಕೆಶಿ