
2026-27 ನೇ ಸಾಲಿನ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET-UG 2026) ಅರ್ಜಿ ಸಲ್ಲಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಅವಕಾಶನೀಡಲಾಗಿದೆ. ಈ ಹಿಂದೆ ಮಾರ್ಚ್ 8ಕ್ಕೆ ಮುಕ್ತಾಯವಾದ ಅರ್ಜಿ ಸಲ್ಲಿಕೆಗಾಗಿ ಇದೀಗ ಮಾರ್ಚ್ 11 ರಂದು ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯ ಶುಲ್ಕವನ್ನು ಮಾರ್ಚ್ 11 ರ ರಾತ್ರಿ 11:59 ರಿಂದ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಅಥವಾ ಜೈವಿಕ ತಂತ್ರಜ್ಞಾನ) ವಿಷಯದ ವಿಜ್ಞಾನ ಇಂಟರ್ಮೀಡಿಯೇಟ್ ಅಥವಾ ಪಿಯುಸಿ ಉತ್ತರರಾದ ಹಾಗೂ ಕನಿಷ್ಠ 17 ವರ್ಷ ವಯೋಮಿತಿ ಹೊಂದಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 1700, ಇಡಬ್ಲ್ಯೂಎಸ್/ಒಬಿಸಿ-ಎನ್ಸಿಎಲ್ ವರ್ಗದವರಿಗೆ ರೂ. 1600 ಹಾಗೂ ಎಸ್ಸಿ/ಎಸ್ಟಿ/ದಿವ್ಯಾಂಗ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ರೂ. 1000 ನೋಂದಣಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10ನೇ ಪಾಸಾಗಿದ್ರೆ ಸಾಕು!
ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇಶಾದ್ಯಂತ ಪೆನ್ ಮತ್ತು ಪೇಪರ್ (ಆಫ್ಲೈನ್) ಮಾದರಿಯಲ್ಲಿ ಪರೀಕ್ಷೆ ನಡೆಯುತ್ತದೆ, ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳಿಗೆ 011-40759000/69227700 ಸಂಖ್ಯೆಗಳು ಅಥವಾ neetug2026@nta.ac.in ಇಮೇಲ್ ಅನ್ನು ಸಂಪರ್ಕಿಸಲಾಗಿದೆ. ಸರ್ವರ್ ಡೌನ್ ಸಮಸ್ಯೆ ಕೊನೆಯ ಕ್ಷಣದವರೆಗೆ ಕಾಯದೆ ಅರ್ಜಿ ಸಲ್ಲಿಸುವುದು ಉತ್ತಮ ಎಂದು NTA ಸೂಚಿಸಿದೆ.
NEET ಯುಜಿ ಆನ್ಲೈನ್ ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ