
ಚಿಕ್ಕಬಳ್ಳಾಪುರ, ಮಾರ್ಚ್ 10: ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ (ಕೊಲ್ಲಲು) ಅಜ್ಜಿಯನ್ನು (ಅಜ್ಜಿ) ಚೇಳೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್ 24 ರಂದು ನಡೆದ ಘಟನೆ. ತಡವಾಗಿ ಬೆಳಕಿಗೆ ಬಂದಿದೆ. ಎಫ್ ಎಸ್ ಎಲ್ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದ ಅಜ್ಜಿ ಮೆಹಬೂಬಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಡಿಸೆಂಬರ್ 24 ರಂದು ಚೇಳೂರು ಪಟ್ಟಣದಲ್ಲಿ ಮೆಹಮೂಬಿ ಎಂಬಾಕೆಯ ಮನೆಯಲ್ಲಿ ಈಕೆಯ ಮೊಮ್ಮಗಳ 40 ದಿನದ ಗಂಡು ಮಗು ಸಾವನ್ನಪ್ಪಿತ್ತು. ಅನಾರೋಗ್ಯ ಸಮಸ್ಯೆಯಿಂದ ಮಗುವಾಗಿದೆ ಎಂದು ಅಜ್ಜಿ ಮಣ್ಣು ಸಹ ಮಾಡಿಸಿಬಿಟ್ಟಿದ್ದಳು.
ಇದನ್ನೂ ಓದಿ: ಮೆಸೇಜ್ ಮಾಡಿ ಲಾಡ್ಜ್ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿರುವ ಕತರ್ನಾಕ್ ಲೇಡಿ ಅರೆಸ್ಟ್
ಆದರೆ ಅಜ್ಜಿಯ ಮೇಲೆ ಅನುಮಾನಗೊಂಡ ಮೊಮ್ಮಗಳು, ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಎಫ್ ಎಸ್ ಎಲ್ ವರದಿಗೆ ಕಳುಹಿಸಲಾಗಿದೆ. ಎಫ್ಎಸ್ಎಸ್ಎಲ್ ವರದಿಯಲ್ಲಿ ಮಗು ಉಸಿರುಗಟ್ಟಿದ ಘಟನೆ ಬೆಳಕಿಗೆ ಬಂದಿದೆ. ಹೀಗಾಗಿ ಮಗುವಿನ ಅಜ್ಜಿಯೇ ಕೊಲೆ ಮಾಡಿರುವುದು ಬಯಲಾಗಿತ್ತು, ಮೆಹಬೂಬಿಯನ್ನ ಬಂಧಿಸಿ ಜೈಲಿಗಟ್ಟಲಾಗಿದೆ.
ಅಜ್ಜಿಯ ಮೊಮ್ಮಗಳು ಅನ್ಯಧರ್ಮದ ಯುವಕನೊಂದಿಗೆ ಪ್ರೇಮವಿವಾಹವಾಗಿದ್ದು, ಬಾಣಂತನಕ್ಕೆ ಅಜ್ಜಿಯ ಮನೆಗೆ ಬಂದಿದ್ದಳು. ಅಜ್ಜಿಗೆ ಅನ್ಯಧರ್ಮದ ಯುವಕನೊಂದಿಗೆ ಪ್ರೇಮ ವಿವಾಹವಾಗುವುದು ಇಷ್ಟವಿರಲಿಲ್ಲ. ಹಾಗೂ ಮಗುವನ್ನು ನೋಡಿಕೊಳ್ಳಲು ಆಗುವುದಿಲ್ಲ ಎಂಬ ಕಾರಣಕ್ಕೆ ಕೊಲೆ ಮಾಡಿ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾರೆ.
ಇದನ್ನೂ ಓದಿ: ರಾಯಚೂರಿನಲ್ಲಿ ಘೋರ ದುರಂತ: ದಂಪತಿಯನ್ನು ಬಲಿಪಡೆದ ಕನಸಿನ ಮನೆ!
ಒಟ್ಟಿನಲ್ಲಿ ಪ್ರಪಂಚ ನೋಡುವ ಮೊದಲೇ ಹಸುಗೂಸನ್ನು ಹತ್ಯೆಗೈಯುವ ಮೂಲಕ ಅಜ್ಜಿ ಜೈಲುಪಾಲಾದರೆ, ಇತ್ತ 9 ತಿಂಗಳ ನವ ಮಾಸ ಹೊತ್ತು ಹೆತ್ತ ತಾಯಿ ತನ್ನ ಮಗನನ್ನು ಕಳೆದುಕೊಂಡು ಜೀವನಪರ್ಯಂತ ನೋವು ಅನುಭವಿಸಿದೆ.
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.