ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೂ ಸಂಕಷ್ಟ; ಊಟದ ಮೆನುನೇ ಚೇಂಜ್

ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೂ ಸಂಕಷ್ಟ; ಊಟದ ಮೆನುನೇ ಚೇಂಜ್


ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೆ ಸಂಕಷ್ಟ; ಊಟದ ಮೆನುನೇ ಚೇಂಜ್

ಬೆಂಗಳೂರು, ಮಾರ್ಚ್ 10: ಮಧ್ಯಪ್ರಾಚ್ಯದಲ್ಲಿನ ಯುದ್ಧ (ಇರಾನ್ ಇಸ್ರೇಲ್ ಯುದ್ಧ) ಎಷ್ಟರಮಟ್ಟಿಗೆ ಎಫೆಕ್ಟ್ ತಟ್ಟಿದೆ ಅಂದರೆ ಸದ್ಯ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಗೆ ಹಾಹಾಕಾರ ಉಂಟಾಗಿದೆ. ಕಮರ್ಷಿಯಲ್ ಸಿಲಿಂಡರ್‌ಗೆ 115 ರೂ ಏರಿಕೆಯಾಗಿದೆ, ಇದು ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಇತ್ತ ಬೆಂಗಳೂರಿನ ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿರುವುದು ಇಡೀ ಹೋಟೆಲ್ ಉದ್ಯಮ ಸೇರಿದಂತೆ ಇದೀಗ (ಪಿಜಿ) ಪಿಜಿಗೂ ಆತಂಕ ಶುರುವಾಗಿದೆ.

ಪಿಜಿಗೂ ತಟ್ಟಿದ ಯುದ್ಧದ ಎಫೆಕ್ಟ್

ಸಿಲಿಕಾನ್ ಸಿಟಿ ಬೆಂಗಳೂರಿಗೆ ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ಹೀಗೆ ಆಗಮಿಸುವವರು ಹೆಚ್ಚಾಗಿ ಪಿಜಿಗಳನ್ನೇ ಅವಲಂಬಿಸುತ್ತಾರೆ. ಆದರೆ ಪ್ರಸ್ತುತ 15 ಸಾವಿರ ಪಿಜಿಗಳಲ್ಲಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇನ್ನು ಸಾಮಾನ್ಯವಾಗಿ ಪಿಜಿಗಳಲ್ಲಿ ದಿನಕ್ಕೆ ಮೂರು ಬಾರಿ ಊಟದ ವ್ಯವಸ್ಥೆ ಮಾಡಲಾಗಿದೆ. ಆದರೆ ಇದೀಗ ಉಂಟಾಗಿರುವ ಗ್ಯಾಸ್ ಕೊರತೆಯಿಂದಾಗಿ ಪಿಜಿ ಅಡುಗೆ ಮಾಡುವುದಕ್ಕೂ ಚಿಂತಿಸಬೇಕಾಗಿದೆ.

ಪಿ.ಜಿ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಪಿ.ಜಿ ಉಪಸ್ಥಿತಿ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಹೇಳಿಕೆ ನೀಡಿದ್ದು, ಪಿಜಿಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಗುತ್ತಿಲ್ಲ. ಸದ್ಯ ಇನ್ನೊಂದು ವಾರ ಇರುವ ಸಿಂಡರ್ ನಲ್ಲೇ ಮ್ಯಾನೇಜ್ ನಡೆಯಲಿದೆ. ಮುಂದೆ ಹೇಗೆ ಎಂಬ ಭೀತಿ ಎದುರಾಗಿದೆ ಎಂದು ಹೇಳಿದ್ದಾರೆ.

ಊಟದ ಮೆನು ಕೂಡ ಚೇಂಜ್

ಇದರಿಂದ ಊಟದ ಮೆನುವಿನಲ್ಲಿ ಬದಲಾವಣೆ ಮಾಡಲು ನಿರ್ಧಾರ ಮಾಡಿದ್ದೇವೆ. ಪಿಜಿಗಳಲ್ಲಿ ಚಪಾತಿ, ರೊಟ್ಟಿ ಮಾಡದಂತೆ ನಿರ್ಧರಿಸಲಾಗಿದೆ. ಅನ್ನ, ಸಾಂಬಾರ್, ಪಲಾವ್ ಹೀಗೆ ಗ್ಯಾಸ್ ಕಡಿಮೆ ಆಗುವ ಪದಾರ್ಥಗಳನ್ನು ಮಾಡಲು ನಿರ್ಧರಿಸಲಾಗಿದೆ. ಆ ಮೂಲಕ ಪಿಜಿಗಳಲ್ಲಿ ಇಂದಿನಿಂದಲೇ ಹೊಸ ಮೆನು ಜಾರಿ ಆಗುತ್ತೆ. ಕಮರ್ಷಿಯಲ್ ಗ್ಯಾಸ್ ದರ ಹೆಚ್ಚಾದರೂ ಹೆಚ್ಚಿಲ್ಲ. ಸದ್ಯ ನಾವೇ ಭರಿಸುತ್ತೇವೆ. ಇದೆ ದರ ಮುಂದುವರೆದರೆ ನೋಡಬೇಕಾಗುತ್ತೆ. ಈ ಕುರಿತು ಮತ್ತು ರಾಜ್ಯ ಸರ್ಕಾರ ನಮ್ಮ ನೆರವಿಗೆ ಮುಂದಾಗಬೇಕಿದೆ ಎಂದು ಪಿ.ಜಿ ಕೇಂದ್ರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *