
ದೇವನಹಳ್ಳಿ, ಮಾರ್ಚ್ 10: ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ಕೇಬಲ್ ಫ್ಯಾಕ್ಟರಿಯನ್ನೇ ಸಂಪೂರ್ಣವಾಗಿ ಸುತ್ತು (ಕೇಬಲ್ ಕಾರ್ಖಾನೆ ಬೆಂಕಿ) ಬೂದಿ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಕೇಬಲ್ ವೈರ್ಗಳು ಬೆಂಕಿಗಾಹುತಿಯಾಗಿದೆ. ಸತತ 22 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದ್ದು, ಸ್ಥಳಿಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರು ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಫ್ಯಾಕ್ಟರಿಯಲ್ಲಿ ನಿನ್ನೆ ಘಟನೆ ನಡೆದಿದೆ.
ನಿನ್ನೆ ಸಂಜೆ ಐದು ಗಂಟೆ ಸಮಯಕ್ಕೆ ಕಾರ್ಮಿಕರೆಲ್ಲ ಕೆಲಸ ಮುಗಿಸಿ ಮನೆಗೆ ತೆರಳುವ ತವಕದಲ್ಲಿರುವಾಗಲೇ ಮೂಲೆಯೊಂದರಲ್ಲಿ ಹೊತ್ತಿಕೊಂಡ ಬೆಂಕಿ ನೋಡುತ್ತಿದ್ದಂತೆ ಸಂಪೂರ್ಣ ಫ್ಯಾಕ್ಟರಿಯನ್ನೇ ಆವರಿಸಿತ್ತು. ಹೆದ್ದಾರಿ ಫ್ಲೈಓವರ್ ಮೇಲೆ ನಿಂತು ನೋಡಿದ ಜನರಿಗೆ ಅಕ್ಷರಶಃ ಯಾವುದೋ ಬಾಂಬ್ ಬಿದ್ದಂತೆ ಬಾನೆತ್ತರಕ್ಕೆ ದಟ್ಟ ಹೊಗೆ ಆವರಿಸಿರುವ ದೃಶ್ಯ ಕಂಡುಬಂದಿದ್ದು ಎಲ್ಲರೂ ಒಂದು ಕ್ಷಣ ಬೆಚ್ಚಿ ಬಿದ್ದಿದ್ದರು. ಇನ್ನು ಅಗ್ನಿ ಅವಘಡಕ್ಕೆ ಸಂಪೂರ್ಣ ಕೈಗಾರಿಕಾ ಫ್ಯಾಕ್ಟರಿ ಸುತ್ತು ಭಸ್ಮವಾಗಿದ್ದು, 22 ಗಂಟೆಗೂ ಅಧಿಕ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
ಕೋಟ್ಯಂತರ ರೂ ನಷ್ಟ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಫ್ಯಾಕ್ಟರಿಯಲ್ಲಿ ನಿನ್ನೆ ಸಂಜೆ 05:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಕಾಣಿಸುತ್ತಿದ್ದಂತೆ ಎಚ್ಚೆತ್ತ ಕಾರ್ಮಿಕರು ಆಡಳಿತ ಮಂಡಳಿ ಬೆಂಕಿ ನಂದಿಸುವ ಯತ್ನ ಮಾಡಿದರು ರಬ್ಬರ್ ಮತ್ತು ಪ್ಲಾಸ್ಟಿಕ್ ಬೆಂಕಿ ಹೊತ್ತಿಕೊಂಡ ಕಾರಣ ಬೆಂಕಿ ನಂದಿಸಲು ವಿಫಲವಾದ ಫ್ಯಾಕ್ಟರಿಯಿಂದ ಹೊರಗೆ ಬಂದಿದ್ದಾರೆ.
ಇದನ್ನೂ ಓದಿ: ಸ್ಕೂಟರ್ ನಿರಾಕರಿಸಿದ್ದಕ್ಕೆ ಗೆಳತಿ ಮತ್ತು ಆಕೆಯ ಪೋಷಕರ ಮೇಲೆ ಬೆಂಕಿ ಹಚ್ಚಿದ ಬೆಂಗಳೂರಿನ ವ್ಯಕ್ತಿ
ಇನ್ನು ಕಾರ್ಮಿಕರು ಹೊರಗೆ ಬರುತ್ತಿದ್ದಂತೆ ಬೆಂಕಿ ತನ್ನ ನರ್ತನವನ್ನೆ, ಕ್ಷಣ ಮಾತ್ರದಲ್ಲಿಯೇ ಒಂದು ಅಂಗಡಿಯಷ್ಟು ವಿಸ್ತೀರ್ಣದಲ್ಲಿರುವ ಸಂಪೂರ್ಣ ಫ್ಯಾಕ್ಟರಿಗೆ ಬೆಂಕಿ ಆವರಿಸಿದೆ. ಬೆಂಕಿಯ ಕೆನ್ನಾಲೆಗೆ ಫ್ಯಾಕ್ಟರಿ ಧಗಧಗನೆ ಹೊತ್ತಿ ಉರಿದು ಕೆಲ ಸಿಲಿಂಡರ್ ಸಹ ಸ್ಪೋಟಗೊಂಡಿವೆ ಎನ್ನಲಾಗ್ತಿದ್ದು, ಬೆಂಕಿಯ ರುದ್ರ ನರ್ತನಕ್ಕೆ ಫ್ಯಾಕ್ಟರಿ ಸುತ್ತು ಕರಕಲಾಗಿದೆ.
ಫ್ಯಾಕ್ಟರಿಗೆ ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸಹ ಸ್ಥಳಕ್ಕೆ ದೌಡಾಯಿಸಿ ಬಂದಿದ್ದು, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ ಎಷ್ಟೇ ನೀರು ಹೊಡೆದರು ಬೆಂಕಿ ಹತೋಟಿಗೆ ಬಾರದ ಕಾರಣ ಚಿಕ್ಕಬಳ್ಳಾಪುರ, ಕೋಲಾರ, ಗೌರಿಬಿದನೂರು, ಯಲಹಂಕ, ವೈಟ್ ಫೀಲ್ಡ್, ನೆಲಮಂಗಲ, ದೇವನಹಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ 15ಕ್ಕೂ ಅಧಿಕ ಅಗ್ನಿಶಾಮಕ ವಾಹನ ಹಾಗೂ ನೂರಕ್ಕೂ ಅಧಿಕ ಸಿಬ್ಬಂದಿಯನ್ನ ಕರೆಸಲಾಗಿದೆ. ಜೊತೆಗೆ ಫ್ಯಾಕ್ಟರಿ ಪಕ್ಕದಲ್ಲೇ ಇದ್ದ ರೈತನ ಕೃಷಿ ಹೊಂಡದಿಂದ ನೀರನ್ನ ತುಂಬಿಕೊಂಡು ರಾತ್ರಿ ಪೂರ್ತಿ ನೀರು ಹೊಡೆದರ ಬೆಂಕಿ ಹಾರಿಲ್ಲ. ಕೊನೆಗೆ ಸತತ 22 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ನಂದಿಸಿದ್ದರು ಸಹ ಅಲ್ಲಿ ಹೊಗೆ ಹಾಡುತ್ತಲ್ಲಿದ್ದು, ಅದನ್ನು ಸಹ ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್ ನೋಡಿ ಸಿಬ್ಬಂದಿ ಶಾಕ್
ಇನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಫ್ಯಾಕ್ಟರಿಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಸೂಕ್ತ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕಾರಣ ಎನ್ನಲಾಗುತ್ತಿದೆ. ಆಕಸ್ಮಿಕ ಅಗ್ನಿ ಅವಘಡಕ್ಕೆ ಕೋಟಿ ಕೋಟಿ ಮೌಲ್ಯದ ಕೇಬಲ್ ಹಾಗೂ ಕಚ್ಚಾ ವಸ್ತುಗಳು ಸುತ್ತು ಕರಕಲಾಗಿವೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಏನು ಪ್ರಕರಣ ದಾಖಲಾಗಿದೆ, ತನಿಖೆ ಬಳಿಕ ಬೆಂಕಿ ಅವಘಡಕ್ಕೆ ಕಾರಣ ಅನ್ನೋದು ಬೆಳಕಿಗೆ ಬರಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.