Headlines

ರಾಯಚೂರಲ್ಲೂ ಸಿಗ್ತಿಲ್ಲ ವಾಣಿಜ್ಯ ಸಿಲಿಂಡರ್; ಕೇಂದ್ರ ಸಚಿವರಿಗೆ ಸಂಸದ ಬರೆದ ಪತ್ರದಲ್ಲೇನಿದೆ? | Middle East War Impact Raichur Mp G Kumar Nayak Writes To Centre Regarding Commercial Lpg Issues

ರಾಯಚೂರಲ್ಲೂ ಸಿಗ್ತಿಲ್ಲ ವಾಣಿಜ್ಯ ಸಿಲಿಂಡರ್; ಕೇಂದ್ರ ಸಚಿವರಿಗೆ ಸಂಸದ ಬರೆದ ಪತ್ರದಲ್ಲೇನಿದೆ? | Middle East War Impact Raichur Mp G Kumar Nayak Writes To Centre Regarding Commercial Lpg Issues


ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿದೆ. ಇದರಿಂದ ಹೋಟೆಲ್ ಮತ್ತು ಪಿಜಿ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ಸಮಸ್ಯೆ ಬಗೆಹರಿಸಲು ರಾಯಚೂರು ಸಂಸದರು ಕೇಂದ್ರ ಸಚಿವರಿಗೆ ಪತ್ರ ಬರೆದು ಒತ್ತಾಯ.

ರಾಯಚೂರು (ಮಾ.11): ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಭೀಕರ ಪರಿಣಾಮ ಈಗ ಭಾರತದ ಮೇಲೂ ತಟ್ಟಿದೆ. ಯುದ್ಧದ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಕಮರ್ಷಿಯಲ್ (ವಾಣಿಜ್ಯ) ಸಿಲಿಂಡರ್ ಸರಬರಾಜಿನಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಇದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ.

ಹೋಟೆಲ್ ಮತ್ತು ಪಿಜಿ ಮಾಲೀಕರ ಪರದಾಟ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮಿಗಳು ಹಾಗೂ ಪಿಜಿ (PG) ಮಾಲೀಕರು ಕಂಗಾಲಾಗಿದ್ದಾರೆ. ಸಿಲಿಂಡರ್ ಸಿಗದೇ ಅಡುಗೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಲಕ್ಷಾಂತರ ಗ್ರಾಹಕರು ಮತ್ತು ಜನಸಾಮಾನ್ಯರಿಗೆ ಊಟದ ಸಮಸ್ಯೆ ಎದುರಾಗಿದೆ. ವ್ಯಾಪಾರ ವಹಿವಾಟು ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ಈಗ ಬೀದಿಗೆ ಬೀಳುವ ಆತಂಕದಲ್ಲಿವೆ.

ಕೇಂದ್ರ ಸಚಿವರಿಗೆ ರಾಯಚೂರು ಸಂಸದರ ಪತ್ರ

ವಾಣಿಜ್ಯ ಸಿಲಿಂಡರ್ ಅಭಾವದ ತೀವ್ರತೆಯನ್ನು ಮನಗಂಡು ರಾಯಚೂರು ಸಂಸದ ಜಿ. ಕುಮಾರ್ ನಾಯಕ್ ಅವರು ಕೇಂದ್ರ ಸರ್ಕಾರದ ಇಬ್ಬರು ಪ್ರಭಾವಿ ಸಚಿವರಿಗೆ ತುರ್ತು ಪತ್ರ ಬರೆದಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸಂಸದರು, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಕೇಂದ್ರಕ್ಕೆ ಬರೆದ ಪತ್ರದಲ್ಲೇನಿದೆ?

ತಮ್ಮ ಪತ್ರದಲ್ಲಿ ಸಂಸದ ಜಿ. ಕುಮಾರ್ ನಾಯಕ್ ಅವರು, ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್ ಉದ್ಯಮ ಭಾರೀ ಸಂಕಷ್ಟದಲ್ಲಿದೆ. ಇದರಿಂದ ಜನಸಾಮಾನ್ಯರಿಗೂ ತೊಂದರೆಯಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಯುದ್ಧದ ಪರಿಸ್ಥಿತಿಯ ನಡುವೆಯೂ ದೇಶದಲ್ಲಿ ಕಮರ್ಷಿಯಲ್ ಸಿಲಿಂಡರ್ ಸಮರ್ಪಕವಾಗಿ ಸಿಗುವಂತೆ ಕ್ರಮ ವಹಿಸಬೇಕೆಂದು ಅವರು ಆಗ್ರಹಿಸಿದ್ದಾರೆ.



Source link

Leave a Reply

Your email address will not be published. Required fields are marked *