ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ


ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್ ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೇಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಬಂಧಿಸಿದ್ದಾರೆ.

ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಎಗರಿಸಿ ಪರಾರಿಯಾಗುತ್ತಿದ್ದಳು.ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆಕೆಯ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್ ಕಳ್ಳತನದ ಬಗ್ಗೆ ಪ್ರಮುಖ ಸುಳಿವು ನೀಡಿದೆ.

ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ ಫಿರ್ದೋಸ್ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ ಎಂದು ಹೇಳಲಾಗಿದೆ. ಒಟ್ಟು ಇದರ ಬೆಲೆ ಅಂದಾಜು 18 ಲಕ್ಷ ರೂ ಇರಬಹುದು ಎಂದು ಅಂದಾಜಿಸಲಾಗಿದೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣಗಳು ಇವೆ. ವೇಳೆ ಸೂಕ್ತವಾದ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು. ಕೊನೆಗೂ ತುಂಗಾ ನಗರ ಪೊಲೀಸರ ಚಾಣಾಕ್ಷತನದಿಂದ ಈಕೆಯ ಕಳ್ಳಾಟಕ್ಕೆ ಬ್ರೇಕ್ ಬಿದ್ದಿದೆ.

ಇದನ್ನೂ ಓದಿ: 6 ತಿಂಗಳ ಸ್ಕೆಚ್, ಪಕ್ಕಾ ಪ್ಲ್ಯಾನ್ ಮಾಡಿ ಕಳ್ಳತನ: 1.8 ಕೆಜಿ ಬಂಗಾರ, ಡೈಮಂಡ್ ಕದ್ದವ ಅರೆಸ್ಟ್

ಮದುವೆ ಮನೆಗೆ ಚಿನ್ನಾಭರಣ ಹಾಕಿಕೊಂಡು ಬರುವ ಜನರನ್ನು ಇವಳು ವಾಚ್ ಮಾಡುತ್ತಿದ್ದಳು. ಅವರು ಚಿನ್ನಾಭರಣ ಬ್ಯಾಗ್ ನಲ್ಲಿ ಇಡುವುದನ್ನು ಗಮನಿಸಿದ ಬಳಿಕ ಅದನ್ನು ಗಪ್ ಚುಪ್ ಆಗಿ ಬುರ್ಖಾ ಬಂದು ಎಗರಿಸಿಕೊಂಡು ಹೋಗುತ್ತಿದ್ದಳು.ಕೆಲವು ಸಂದರ್ಭದಲ್ಲಿ ಇವಳ ಕಳ್ಳತನ ಮಾಡುವಾಗ ಸ್ಥಳೀಯರಿಗೆ ಸಿಕ್ಕಿದ್ದಾಳೆ. ಅಲ್ಲಿರುವ ಜನರು ಮಹಿಳೆ ಅಂತಾ ಅನುಕಂಪ ತೋರಿಸಿ ವಾರ್ನ್ ಮಾಡಿ ಬಿಟ್ಟು ಕಳಿಸಿದ್ದಾರೆ. ಇದರ ಬಳಿಕವೂ ಈ ಕಳ್ಳಿಯ ನಡವಳಿಕೆಯ ಬದಲು ಆಗಲಿಲ್ಲ. ಮತ್ತೆ ಇದೆ ಕಳ್ಳತನ ಇತ್ತು. ಇತ್ತೀಚೆಗೆ ಮತ್ತೆ ನಾಲ್ಕು ಕಳ್ಳತನ ಪ್ರಕರಣ ದಾಖಲು ಆಗಿವೆ. ಈ ಕಳ್ಳತನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದಾಗ ಈ ಕಿಲಾಡಿ ಕಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಹೀಗೆ ಮಹಿಳೆಯಾಗಿ ಮದುವೆ ಸಮಾರಂಭದಲ್ಲಿ ಎಂಟ್ರಿಕೊಟ್ಟು ಚಿನ್ನಾಭರಣ ಕದ್ದುಕೊಂಡು ಹೋಗುತ್ತಿದ್ದಳು ಎಂದು ಮ್ಯಾರೇಜ್ ಹಾಲ್ ಮಾಲೀಕ ಮಹ್ಮದ್ ಜುಬೆಲ್ ಹೇಳಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *